ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವವರಿಗೆ ಪೊಷಿಟ್ರಾನ್ ಎಮಿಷನ್ ಟೊಮೋಗ್ರಫಿ (ಪಿಇಟಿ) ಪರೀಕ್ಷೆಯನ್ನು ಉಚಿತವಾಗಿ ನಡೆಸಲು ಕಿದ್ವಾಯಿ ಸಂಸ್ಥೆ ನಿರ್ಧರಿಸಿದೆ.
ಈ ಸಂಬಂಧ ಮಾತನಾಡಿರುವ ಸಂಸ್ಥೆಯ ನಿರ್ದೇಶಕ ಡಾ. ಸಿ ರಾಮಚಂದ್ರ, ಕ್ಯಾನ್ಸರ್, ಹೃದಯ ಸಂಬಂಧಿ ಸಮಸ್ಯೆಗಳು, ಮೆದುಳು ಸಂಬಂಧಿ ಕಾಯಿಲೆಗಳನ್ನು ಪತ್ತೆ ಹಚ್ಚುವಲ್ಲಿ ಪಿಇಟಿ ಸ್ಕ್ಯಾನ್ ಸಹಕಾರಿ. ವಿಶ್ವದ ವಿವಿಧೆಡೆ ಈ ಸ್ಕ್ಯಾನಿಂಗ್ಗಾಗಿ ಸುಮಾರು 30 ಸಾವಿರ ರೂ. ಗಳನ್ನು ಪಡೆಯಲಾಗುತ್ತದೆ. ನಮ್ಮಲ್ಲಿ ಈ ಸ್ಕ್ಯಾನಿಂಗ್ ಅನ್ನು ಕೇವಲ 8 ಸಾವಿರ ರೂ. ಗಳಿಗೆ ಮಾಡುತ್ತೇವೆ. ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಇದನ್ನು ಉಚಿತವಾಗಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಿದ್ವಾಯಿ ಅಸ್ಪತ್ರೆಯನ್ನು ದೇಶದಲ್ಲೇ ಮಾದರಿ ಆಸ್ಪತ್ರೆಯನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದು, ಹಾಸಿಗೆಯ ಸಾಮರ್ಥ್ಯವನ್ನು 650 ರಿಂದ 1 ಸಾವಿರಕ್ಕೆ ಏರಿಕೆ ಮಾಡಲು ಪೂರಕ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಜೂನ್ ತಿಂಗಳ ವೇಳೆಗೆ ಈ ಯೋಜನೆ ಪೂರ್ಣವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.