ಅಗರ್ತಲಾ: ಅಗರ್ತಲಾ ಸ್ಮಾರ್ಟ್ ಸಿಟಿ ಲಿಮಿಟೆಡ್ (ಎಎಸ್ಸಿಎಲ್) ಯೋಜನೆಯಡಿ ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್ ತ್ಯಾಜ್ಯವನ್ನು ಬಳಸುವ ಮೂಲಕ ತ್ರಿಪುರಾ ತನ್ನ ಮೊದಲ ಪ್ಲಾಸ್ಟಿಕ್ ರಸ್ತೆಯನ್ನು ನಿರ್ಮಿಸಿದೆ.
“ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿಮೆ ಮಾಡಲು ಮತ್ತು ಪರಿಸರವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಉದ್ದೇಶದಿಂದ ಈ ರಸ್ತೆಯನ್ನು ನಿರ್ಮಿಸಲಾಗಿದೆ” ಎಂದು ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಹೇಳಿದ್ದಾರೆ.
ಮೊದಲ ಪ್ಲಾಸ್ಟಿಕ್ ರಸ್ತೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಬಿಪ್ಲಬ್ ಕುಮಾರ್ ದೇಬ್, “ತ್ರಿಪುರದಲ್ಲಿ ಇದೇ ಮೊದಲ ಬಾರಿಗೆ ತ್ಯಾಜ್ಯ ಪ್ಲಾಸ್ಟಿಕ್ ಸಂಗ್ರಹಿಸಿ ಅದನ್ನು ರಸ್ತೆ ನಿರ್ಮಾಣಕ್ಕೆ ಮರುಬಳಕೆ ಮಾಡಲಾಗಿದೆ. 680 ಮೀಟರ್ ಉದ್ದದ ರಸ್ತೆಯನ್ನು ಪ್ಲಾಸ್ಟಿಕ್ ಬಳಸಿ ನಿರ್ಮಾಣ ಮಾಡಲಾಗಿದೆ. ಮುಂದೆಯೂ ಇಂತಹ ರಸ್ತೆ ನಿರ್ಮಾಣ ಮಾಡಲಾಗುವುದು. ಇದು ತ್ರಿಪುರದ ಮೊದಲ ಈ ರೀತಿಯ ಉಪಕ್ರಮವಾಗಿದೆ ಮತ್ತು ಇದರ ಮೂಲಕ, ಪ್ಲಾಸ್ಟಿಕ್ ತ್ಯಾಜ್ಯವನ್ನು ನ್ಯಾಯಯುತ ಬಳಕೆಗೆ ತರುವ ಮೂಲಕ ಅದನ್ನು ಹೇಗೆ ಕಡಿಮೆಗೊಳಿಸಬಹುದು ಎಂಬುದಕ್ಕೆ ಉದಾಹರಣೆ ನೀಡಲು ನಾನು ಬಯಸುತ್ತೇನೆ. ಈ ಉಪಕ್ರಮವು ನಮ್ಮ ಪರಿಸರವನ್ನು ಪ್ಲಾಸ್ಟಿಕ್ನಿಂದ ಮುಕ್ತಗೊಳಿಸಬಹುದು ಮತ್ತು ಸಾರ್ವಜನಿಕ ಕಲ್ಯಾಣ ಯೋಜನೆಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಹೇಗೆ ಬಳಸಬಹುದು ಎಂಬುದಕ್ಕೆ ಸುಂದರ ಉದಾಹರಣೆಯಾಗಬಲ್ಲದು” ಎಂದಿದ್ದಾರೆ.
ಈ ರಸ್ತೆ ಕೇವಲ ಪ್ರಯೋಗವಾಗಿದೆ ಆದರೆ ಮುಂದಿನ ದಿನಗಳಲ್ಲಿ, ಉತ್ಪತ್ತಿಯಾಗುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡಲು ಇಂತಹ ಹೆಚ್ಚಿನ ಪ್ಲಾಸ್ಟಿಕ್ ರಸ್ತೆಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಬಿಪ್ಲಬ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.