ನವದೆಹಲಿ: ವಿಶ್ವದ ಅತಿದೊಡ್ಡ ಮತ್ತು ಅಗ್ರ ಕ್ರಿಕೆಟ್ ಕ್ರೀಡಾಂಗಣ ಇಂದು ಗುಜರಾತಿನಲ್ಲಿ ಉದ್ಘಾಟನೆಗೊಂಡಿದೆ. ಈ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಹೆಸರಿಸಲಾಗಿದೆ. ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕ್ರೀಡಾಂಗಣವನ್ನು ಉದ್ಘಾಟಿಸಿದರು.
ಅಹಮದಾಬಾದ್ನ ಸಬರಮತಿಯಲ್ಲಿರುವ ಈ ಕ್ರೀಡಾಂಗಣದಲ್ಲಿ ಬುಧವಾರ ಭಾರತ ಮತ್ತು ಇಂಗ್ಲೆಂಡ್ ನಡುವೆ ಪಿಂಕ್ ಬಾಲ್ ಟೆಸ್ಟ್ ಪಂದ್ಯ ಆಯೋಜನೆಗೊಂಡಿದೆ. ಈ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿಶೇಷ ಉಪಸ್ಥಿತಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕ್ರೀಡಾಂಗಣವನ್ನು ಉದ್ಘಾಟಿಸಿದ್ದಾರೆ.
ಅಹಮದಾಬಾದ್ನ ಸರ್ದಾರ್ ಪಟೇಲ್ ಮೊಟೆರಾ ಕ್ರೀಡಾಂಗಣ ಎಂದು ಇದನ್ನು ಕರೆಯಲಾಗುತ್ತಿತ್ತು. ಇದಿಗ ಕ್ರೀಡಾಂಗಣವನ್ನು ಮೇಲ್ದರ್ಜೆಗೆ ಏರಿಸಿ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರು ನಾಮಕರಣ ಮಾಡಲಾಗಿದೆ.
ಈ ಕ್ರೀಡಾಂಗಣ 63 ಎಕರೆ ವಿಸ್ತೀರ್ಣದಲ್ಲಿದೆ, 1.10 ಲಕ್ಷ ಜನರು ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿದೆ. ಇದುವರೆಗೆ ಮೆಲ್ಬೋರ್ನ್ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿತ್ತು, ಇದು ಏಕಕಾಲದಲ್ಲಿ 90,000 ಜನರಿಗೆ ಅವಕಾಶ ಕಲ್ಪಿಸುತ್ತದೆ.
‘ಸ್ಟ್ಯಾಚು ಆಫ್ ಯೂನಿಟಿ’ ನಂತರ ಈಗ ಗುಜರಾತ್ ರಾಜ್ಯವು ಕ್ರಿಕೆಟ್ಗಾಗಿ ವಿಶ್ವದ ಅತಿದೊಡ್ಡ ಕ್ರೀಡಾಂಗಣವನ್ನು ನಿರ್ಮಿಸಿ ಹೊಸ ದಾಖಲೆಯನ್ನು ಸ್ಥಾಪಿಸಿದೆ. 800 ಕೋಟಿ ರೂ. ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾದ ಈ ಕ್ರೀಡಾಂಗಣದ ಸೌಂದರ್ಯವು ಅದ್ಭುತವಾಗಿದೆ. ಕ್ರೀಡಾಂಗಣವನ್ನು ಲಾರ್ಸೆನ್ & ಟರ್ಬೊ (ಎಲ್ & ಟಿ) ಕಂಪನಿಯು ನಿರ್ಮಿಸಿದೆ.
Motera in all readiness 😍
Just a few hours left for the #PinkBallTest #INDvENG @Paytm
ARE YOU READY 😎👌🏻 #TeamIndia pic.twitter.com/EdyGsLlQws
— BCCI (@BCCI) February 24, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.