ಬೆಂಗಳೂರು: ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಧಾನಸಭೆಯಲ್ಲಿಂದು ಆತ್ಮಾವಲೋಕನ ಸಭೆ ನಡೆಯಿತು.
ಎಲ್ಲಾ ಪಕ್ಷಗಳನ್ನು ಒಳಗೊಂಡಂತೆ ನಡೆಸಲಾದ ಈ ಸಭೆಯಲ್ಲಿ, ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾತನಾಡಿ, ಜನ ಪ್ರತಿನಿಧಿಗಳು ಸಂಸದೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಡಬೇಕಾಗಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಶ್ರೇಷ್ಟ ಹಾಗೂ ಮಾದರಿ ವ್ಯವಸ್ಥೆ ಎಂದು ಗುರುತಿಸಿಕೊಂಡಿದೆ. ತುರ್ತು ಪರಿಸ್ಥಿತಿಯ ಹೊರತಾಗಿ ನಮ್ಮ ವ್ಯವಸ್ಥೆ ಅತ್ಯುತ್ತಮ ರೀತಿಯಲ್ಲಿಯೇ ನಡೆದುಕೊಂಡು ಬಂದಿದೆ. ನಮ್ಮ ವ್ಯವಸ್ಥೆಯ ಬಗ್ಗೆ ನಮಗೆ ಹೆಮ್ಮೆ ಇರಬೇಕು ಎಂದು ಅವರು ಹೇಳಿದ್ದಾರೆ.
ಆದರೆ ಇತ್ತೀಚೆಗೆ ಸಂಸದೀಯ ಮೌಲ್ಯಗಳ ಕುಸಿತ ಕಂಡುಬರುತ್ತಿದೆ. ಸಂಸದೀಯ ವ್ಯವಸ್ಥೆಯನ್ನು ಉತ್ತಮವಾಗಿ ನಡೆಸಿಕೊಂಡು ಹೋಗಬೇಕಾದ ಕರ್ತವ್ಯ ನಮ್ಮದು. ಈ ವ್ಯವಸ್ಥೆಗೆ ಶಕ್ತಿ ತುಂಬುವ ಕೆಲಸವನ್ನು ಜನಪ್ರತಿನಿಧಿಗಳು ಮಾಡಬೇಕಾಗಿದೆ. ಸದನದ ಗೌರವ ಹೆಚ್ಚಿಸುವುದು ಸದಸ್ಯರ ಜವಾಬ್ದಾರಿ. ಸದನದಲ್ಲಿ ಶಿಸ್ತು ಕಾಪಾಡುವುದು ಮುಖ್ಯ. ಸದನದ ನಿಯಮಗಳನ್ನು ವೈಯಕ್ತಿಕವಾಗಿ ಹೆಚ್ಚಿಸುವ ನಿಟ್ಟಿನನ ಸದಸ್ಯರು ಜಾಗ್ರತೆ ವಹಿಸಬೇಕು ಎಂದು ಅವರು ಹೇಳಿದ್ದಾರೆ. ಜನಕಲ್ಯಾಣವೇ ಮುಖ್ಯ ಎಂಬ ಭಾವನೆ ಜನಪ್ರತಿನಿಧಿಗಳಲ್ಲಿ ಮೂಡಬೇಕು ಎಂದು ಕಾಗೇರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.