ನವದೆಹಲಿ: ಮಾರ್ಚ್ 1 ರಿಂದ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕೆ ಡೋಸ್ಗಳನ್ನು ನೀಡಲಾಗುವುದು ಎಂದು ಕೇಂದ್ರ ಬುಧವಾರ ಘೋಷಣೆ ಮಾಡಿದೆ.
ಕೊಮೊರ್ಬಿಡಿಟಿ ಹೊಂದಿರುವ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸಹ ಅದೇ ದಿನಾಂಕದಿಂದ ಲಸಿಕೆ ನೀಡಲಾಗುವುದು ಎಂದು ಕೇಂದ್ರ ತಿಳಿಸಿದೆ.
“ಮಾರ್ಚ್ 1 ರಿಂದ, 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಕೊಮೊರ್ಬಿಡಿಟಿ ಹೊಂದಿರುವವರಿಗೆ 10,000 ಸರ್ಕಾರಿ ಮತ್ತು 20,000 ಕ್ಕೂ ಹೆಚ್ಚು ಖಾಸಗಿ ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು” ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ಕೊರೊನಾವೈರಸ್ ಲಸಿಕೆಯನ್ನು ಸರ್ಕಾರಿ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುವುದು ಎಂದು ಅವರು ಹೇಳಿದರು.
“ಖಾಸಗಿ ಆಸ್ಪತ್ರೆಗಳಿಂದ ಲಸಿಕೆ ಪಡೆಯಲು ಬಯಸುವವರು ಪಾವತಿಸಬೇಕಾಗುತ್ತದೆ. ತಯಾರಕರು ಮತ್ತು ಖಾಸಗಿ ಆಸ್ಪತ್ರೆಗಳೊಂದಿಗೆ ಚರ್ಚೆ ನಡೆಸಲಾಗುತ್ತಿದ್ದು, ಪಾವತಿಸಬೇಕಾದ ಮೊತ್ತವನ್ನು 3-4 ದಿನಗಳಲ್ಲಿ ಆರೋಗ್ಯ ಸಚಿವಾಲಯ ನಿರ್ಧರಿಸುತ್ತದೆ” ಎಂದು ಹೇಳಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ ಬುಧವಾರ ಬೆಳಿಗ್ಗೆ 7 ಗಂಟೆಯವರೆಗೆ 2,54,356 ಸೆಷನ್ಸ್ಗಳ ಮೂಲಕ ಭಾರತದಾದ್ಯಂತ 1,21,65,598 ಜನರಿಗೆ ಲಸಿಕೆ ನೀಡಲಾಗಿದೆ. ಇವರಲ್ಲಿ 64,98,300 ಆರೋಗ್ಯ ಕಾರ್ಯಕರ್ತರು (1 ನೇ ಡೋಸ್), 13,98,400 ಆರೋಗ್ಯ ಕಾರ್ಯಕರ್ತರು (2 ನೇ ಡೋಸ್) ಮತ್ತು 42,68,898 ಮುಂಚೂಣಿ ಕಾರ್ಮಿಕರು (1 ನೇ ಡೋಸ್) ಸೇರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.