ನವದೆಹಲಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಧಾನಸಭೆಯಲ್ಲಿ ವಿಶ್ವಾಸ ನಿರ್ಣಯವನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಅಲ್ಲಿ ಸರ್ಕಾರ ಪತನಗೊಂಡಿತ್ತು. ಬಳಿಕ ಯಾವ ಪಕ್ಷಗಳೂ ಅಲ್ಲಿ ಸರ್ಕಾರ ರಚನೆ ಮಾಡಲು ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ಅಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ
ಮುಖ್ಯಮಂತ್ರಿ ವಿ ನಾರಾಯಣಸಾಮಿ ರಾಜೀನಾಮೆ ನೀಡಿದ ನಂತರ ಯಾವುದೇ ಪಕ್ಷವು ಸರ್ಕಾರ ರಚಿಸುವುದಾಗಿ ಹೇಳಿಕೊಳ್ಳದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಈ ವಾರದ ಆರಂಭದಲ್ಲಿ, ವಿ ನಾರಾಯಣಸಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ವಿಶ್ವಾಸ ಮತ ಪರೀಕ್ಷೆಯಲ್ಲಿ ಸೋತಿದ್ದು, ಇದರಿಂದ ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು ಮಾಡಬೇಕಾಯಿತು. ಇದೀಗ ಈ ಶಿಫಾರಸಿಗೆ ಕೇಂದ್ರ ಸಚಿವ ಸಂಪುಟವು ಅನುಮೋದಿಸಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ರಾಷ್ಟ್ರಪತಿಗಳ ಅನುಮೋದನೆಯ ನಂತರ ವಿಧಾನಸಭೆ ವಿಸರ್ಜನೆಯಾಗಲಿದೆ ಎಂದು ಜಾವಡೇಕರ್ ಹೇಳಿದರು, ಪುದುಚೇರಿಯಲ್ಲಿ ಆಡಳಿತಾತ್ಮಕ ಕಾರ್ಯಗಳಿಗೆ ಮುಂದಿನ ಅಗತ್ಯ ಕ್ರಮಗಳನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಾಲ್ಕು ರಾಜ್ಯಗಳ ಜೊತೆಗೆ ಚುನಾವಣಾ ಆಯೋಗವು ಅಲ್ಲಿನ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದ ಕೂಡಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.