ಬೆಳ್ತಂಗಡಿ: ರಬ್ಬರ್ ಬೆಳೆಗಾರರ ಸಮಸ್ಯೆಗಳನ್ನು ಮತ್ತು ರಬ್ಬರ್ಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಲಾಗುವುದು. ಜಿಲ್ಲೆಯ ಎಲ್ಲಾ ಶಾಸಕರನ್ನು ಒಳಗೊಂಡು ಸರಕಾರದ ಗಮನ ಸೆಳೆಯಲಾಗುವುದು ಎಂದು ಶಾಸಕ ಕೆ.ವಸಂತ ಬಂಗೇರ ಹೇಳಿದರು.
ಅವರು ಸೋಮವಾರ ಉಜಿರೆಯ ಜಿ.ಎನ್.ಭಿಡೆ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ ಮತ್ತು ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಇದರ ಆಶ್ರಯದಲ್ಲಿ ನಡೆದ ರಬ್ಬರ್ ಬೆಳೆಗಾರರ ಸಮಾಲೋಚನಾ ಸಭೆಯಲ್ಲಿ ರೈತರ ಮನವಿಯನ್ನು ಸ್ವೀಕರಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ ಮತ್ತು ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಅಧ್ಯಕ್ಷ ಶ್ರೀಧರ ಭಿಡೆ ಮನವಿ ಮಾಡಿ, ರಬ್ಬರ್ಗೆ ರೂ.೧೫೦ ಬೆಂಬಲ ಬೆಲೆಯನ್ನು ನಿಗದಿಗೊಳಿಸಬೇಕು. ಕೇಂದ್ರ ಸರಕಾರ ರಬ್ಬರ್ನ್ನು ರಫ್ತು ಮಾಡುತ್ತಿದೆ. ಹೀಗಾಗಿ ಇಲ್ಲಿ ಬೆಲೆ ಕಡಿಮೆಯಾಗಿದೆ. ಸಾಲ ಮಾಡಿ ಕೃಷಿ ಮಾಡಿದ ಕೃಷಿಕರು ತತ್ತರಿಸಿ ಹೋಗುತ್ತಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮೊದಲು ಎಚ್ಚೆತ್ತುಕೊಳ್ಳಬೇಕು. ರಾಜ್ಯ ಸರಕಾರ ಕೇರಳ ಸಕರಕಾರದಂತೆ ಪ್ರೋತ್ಸಾಹ ಧನ ನೀಡಬೇಕು.
ಕೇಂದ್ರ ಸರಕಾರವು ನೈಜ ರಬ್ಬರಿನ ಆಮದನ್ನು ಕೂಡಲೇ ತಡೆಹಿಡಿಯಬೇಕು. ನಮ್ಮ ದೇಶದ ಅಗತ್ಯಕ್ಕೆ ಬೇಕದಷ್ಟೇ ಪ್ರಮಾಣದ ರಬ್ಬರನ್ನು ಆಮದು ಮಾಡಬೇಕು. ಪ್ರಸಕ್ತ ಆಮದು ಸುಂಕ ಶೇ.25 ಇರುತ್ತಿದ್ದು, ಇದನ್ನು ಕನಿಷ್ಠ ಶೇ.70ಕ್ಕೆ ಏರಿಸಬೇಕು. ಎಲ್ಲಾ ರಬ್ಬರ್ ಬೆಳೆಗಾರರ ಪ್ರತಿನಿಧಿಯಾಗಿ ಶಾಸಕ ವಸಂತ ಬಂಗೇರ ಅವರು ಸರಕಾರದ ಗಮನ ಸೆಳೆಯಬೇಕು. ನಮ್ಮ ಹೋರಾಟಕ್ಕೆ ಅವರ ಬೆಂಬಲ ಅಗತ್ಯ ಎಂದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಎನ್.ಪದ್ಮನಾಭ, ಪ್ರಧಾನ ಕಾರ್ಯದರ್ಶಿ ರಾಜು ಶೆಟ್ಟಿ ನಿರ್ದೇಶಕರುಗಳು, ತಾಲೂಕಿನ ವಿವಿಧ ಗ್ರಾಮದ ರಬ್ಬರು ಬೆಳೆಗಾರರು ಮತ್ತಿತರರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.