ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಮತ್ತು 2 ಎ ಮೀಸಲಾತಿಗಾಗಿ ಹಲವು ಸಮುದಾಯಗಳು ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಹಿನ್ನಲೆಯಲ್ಲಿ, ಮೀಸಲಾತಿ ಬಗ್ಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅವರಿಂದ ವರದಿ ತರಿಸಿಕೊಳ್ಳಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಅವರ ವರದಿ ಬಂದ ಬಳಿಕ ಅದನ್ನಾಧರಿಸಿಕೊಂಡು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಸರ್ಕಾರಕ್ಕೆ ಯಾವುದೇ ಸಮುದಾಯ ಒತ್ತಡ ಹೇರಿದರೆ ಮೀಸಲಾತಿ ನೀಡುವುದು ಸಾಧ್ಯವಿಲ್ಲ. ಈ ಹೋರಾಟಗಳಲ್ಲಿ ಭಾಗವಹಿಸುವ ಸ್ವಾಮೀಜಿಗಳು ಧರಣಿ, ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳುತ್ತಿದ್ದಾರೆ. ಆದರೆ ಇಂತಹ ಆಗ್ರಹಗಳಿಂದ ಮೀಸಲಾತಿ ದೊರೆಯುವುದು ಸಾಧ್ಯವಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.
ಈಗಾಗಲೇ ಮೀಸಲಾತಿ ಇರುವ ವರ್ಗಗಳ ಶ್ರೀಮಂತರು ಇಂದಿಗೂ ಮೀಸಲಾತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಇದು ದುರ್ದೈವ. ಬಡವರಿಗಷ್ಟೇ ಮೀಸಲಾತಿ ದೊರೆಯುವ ಹಾಗಾಗಬೇಕು. ಇದಕ್ಕಾಗಿ ಕ್ರಿಮಿಲೇಯರ್ ಪದ್ದತಿ ಜಾರಿಯಾಗಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಅಪೇಕ್ಷೆಯನ್ನಿರಿಸಿಕೊಂಡೇ ಡಾ. ಬಿ ಆರ್ ಅಂಬೇಡ್ಕರ್ ಅವರು ಮೀಸಲಾತಿ ಪದ್ಧತಿಯನ್ನು ಜಾರಿಗೆ ತಂದಿದ್ದರು ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.