ನವದೆಹಲಿ: ಪುದುಚೇರಿಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಬೆಂಬಲವನ್ನು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಪುದುಚೇರಿಯಲ್ಲಿ ಇಂದು 3,023 ಕೋಟಿ ರೂಪಾಯಿ ಮೌಲ್ಯದ ಹಲವಾರು ಕಲ್ಯಾಣ ಯೋಜನೆಗಳಿಗೆ ಅಡಿಪಾಯ ಹಾಕಿದ ನಂತರ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಎನ್ಎಚ್ 45-ಎ ರಸ್ತೆ ಯೋಜನೆಗೆ ಅಡಿಪಾಯ ಹಾಕಿದರು. 2,426 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ಪ್ರಧಾನಿ JIPMER ಕಾರೈಕಲ್ ಕಟ್ಟಡಕ್ಕೆ ಅಡಿಪಾಯ ಹಾಕಿದರು. 491 ಕೋಟಿ ರೂಪಾಯಿ ವೆಚ್ಚದಲ್ಲಿ ಇದು ನಿರ್ಮಾಣವಾಗಲಿದೆ ಮತ್ತು ಆಗಸ್ಟ್ 2022 ರೊಳಗೆ ಪೂರ್ಣಗೊಳ್ಳಲಿದೆ.
ಸಾಗರಮಾಲಾ ಯೋಜನೆಯಡಿ ಪ್ರಧಾನ ಮಂತ್ರಿ 44 ಕೋಟಿ ರೂಪಾಯಿ ವೆಚ್ಚದಲ್ಲಿ ಪುದುಚೇರಿಯಲ್ಲಿ ಸಣ್ಣ ಬಂದರು ಅಭಿವೃದ್ಧಿಪಡಿಸಲು ಅಡಿಪಾಯ ಹಾಕಿದರು. ಈ ಯೋಜನೆಯು ಚೆನ್ನೈಗೆ ಸಂಪರ್ಕವನ್ನು ನೀಡುತ್ತದೆ ಮತ್ತು ಪುದುಚೇರಿಯಲ್ಲಿನ ಕೈಗಾರಿಕೆಗಳಿಗೆ ಸರಕು ಸಾಗಣೆಗೆ ಅನುಕೂಲವಾಗಲಿದೆ. ಅಲ್ಲದೇ, ಇಂದಿರಾ ಗಾಂಧಿ ಕ್ರೀಡಾ ಸಂಕೀರ್ಣದಲ್ಲಿ ಏಳು ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ಗೆ ಅಡಿಪಾಯ ಹಾಕಿದರು.
ಇದಲ್ಲದೆ ಪ್ರಧಾನಮಂತ್ರಿ JIPMERನಲ್ಲಿ ಬ್ಲಡ್ ಸೆಂಟರ್ ಅನ್ನು ಉದ್ಘಾಟಿಸಿದರು, ಇದು ಸಂಶೋಧನಾ ಪ್ರಯೋಗಾಲಯವಾಗಿ ಮತ್ತು ನಿರಂತರ ತರಬೇತಿ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ, ಅಂದಾಜು 28 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸ್ಥಾಪನೆಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.