ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಬುಧವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕೋಲ್ಕತ್ತಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರ್ಜುನ್ ಸಿಂಗ್ ಅವರ ಸಮ್ಮುಖದಲ್ಲಿ ಔಪಚಾರಿಕವಾಗಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು.
ಟ್ವಿಟ್ ಮಾಡಿರುವ ದಿಂಡಾ, “ಈ ರಾಜ್ಯದ ಜನರಿಗೆ ಸೇವೆ ಸಲ್ಲಿಸಲು ನನಗೆ ಬಿಜೆಪಿ ಅವಕಾಶ ನೀಡಿದೆ ಎಂದು ಘೋಷಿಸಲು ನಾನು ಆಶೀರ್ವದಿತನಾಗಿದ್ದೇನೆ. ನನ್ನ ಮೇಲೆ ನಂಬಿಕೆ ತೋರಿಸಿದ್ದಕ್ಕಾಗಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಇಡೀ ತಂಡಕ್ಕೆ ಧನ್ಯವಾದ ಹೇಳಲು ನಾನು ಬಯಸುತ್ತೇನೆ” ಎಂದಿದ್ದಾರೆ.
ಈ ತಿಂಗಳ ಆರಂಭದಲ್ಲಿ ಅವರು ಎಲ್ಲಾ ರೀತಿಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದರು. ಅವರು ಭಾರತಕ್ಕಾಗಿ 13 ಏಕದಿನ ಮತ್ತು ಒಂಬತ್ತು ಟಿ 20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.
ಇಂದು, ಖ್ಯಾತ ನಟಿ ಪಾಯಲ್ ಸರ್ಕಾರ್ ಅವರು ಕೂಡ ಪಶ್ಚಿಮಬಂಗಾಳ ಬಿಜೆಪಿ ಪಕ್ಷದ ಮುಖ್ಯಸ್ಥ ದಿಲೀಪ್ ಘೋಷ್ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.