ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುರುವಾರ ಮಧ್ಯಾಹ್ನ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಮತ್ತು ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ವಿದೇಶಾಂಗ ಸಚಿವಾಲಯ, “ಪೂರ್ವ ಲಡಾಖ್ನಲ್ಲಿ ಮಾಸ್ಕೋ ಒಪ್ಪಂದದ ಅನುಷ್ಠಾನ ಮತ್ತು ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನೆ ವಾಪಾಸ್ಸಾತಿ ಸ್ಥಿತಿಯ ಪರಿಶೀಲನೆ ಬಗ್ಗೆ ಚರ್ಚಿಸಲಾಗಿದೆ” ಎಂದಿದೆ.
“ಇಂದು ಮಧ್ಯಾಹ್ನ ಚೀನಾ ಕೌನ್ಸಿಲರ್ ಮತ್ತು ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಮಾತನಾಡಲಾಗಿದೆ. ಮಾಸ್ಕೋ ಒಪ್ಪಂದದ ಅನುಷ್ಠಾನದ ಬಗ್ಗೆ ಚರ್ಚಿಸಲಾಗಿದೆ ಮತ್ತು ಸೇನೆ ಹಿಂಪಡೆಯುವಿಕೆ ಸ್ಥಿತಿಯನ್ನು ಪರಿಶೀಲಿಸಲಾಗಿದೆ” ಎಂದಿದೆ.
2020 ರ ಸೆಪ್ಟೆಂಬರ್ 10 ರಂದು ಮಾಸ್ಕೋದಲ್ಲಿ ನಡೆದ ಸಭೆಯಲ್ಲಿ ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಸಮಾವೇಶದ ಸಂದರ್ಭದಲ್ಲಿ ಜೈಶಂಕರ್ ಮತ್ತು ವಾಂಗ್ ನಡುವೆ ಐದು ಅಂಶಗಳ ಒಪ್ಪಂದ ಮಾಡಿಕೊಳ್ಳಲಾಯಿತು. ಈ ಒಪ್ಪಂದದಲ್ಲಿ ಸೈನ್ಯವನ್ನು ಶೀಘ್ರವಾಗಿ ನಿಯೋಜನೆಯಿಂದ ಹಿಂಪಡೆಯುವುದು, ಉದ್ವಿಗ್ನತೆಯನ್ನು ಹೆಚ್ಚಿಸುವ ಕ್ರಮವನ್ನು ತಪ್ಪಿಸುವುದು, ಗಡಿ ನಿರ್ವಹಣೆಯ ಎಲ್ಲಾ ಒಪ್ಪಂದಗಳು ಮತ್ತು ಪ್ರೋಟೋಕಾಲ್ಗಳನ್ನು ಅನುಸರಿಸುವುದು ಮತ್ತು ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಶಾಂತಿಯನ್ನು ಪುನಃಸ್ಥಾಪಿಸುವ ಕ್ರಮಗಳು ಸೇರಿವೆ.
Spoke to State Councilor & Foreign Minister Wang Yi this afternoon. Discussed the implementation of our Moscow Agreement and reviewed the status of disengagement.
— Dr. S. Jaishankar (@DrSJaishankar) February 25, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.