ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯ ವಿಸ್ತರಣಾ ಉಪಕ್ರಮದಡಿಯಲ್ಲಿ 12,500 ಕಂಪ್ಯೂಟರ್ ಗಳನ್ನು ರಾಜ್ಯದ ಸರ್ಕಾಋಇ ಪ್ರಥಮ ದರ್ಜೆ ಕಾಲೇಜುಗಳಿಗೆ ನೀಡುವ ಸಂಬಂಧ ಕಾಗ್ನಿಜೆಂಟ್ – ರೋಟರಿ ಕ್ಲಬ್ ಜೊತೆಗೆ ಸರ್ಕಾರ ಒಪ್ಪಂದಕ್ಕೆ ಸಹಿ ಮಾಡಿದೆ.
ಸರ್ಕಾರದ ಪರ ಉಪಮುಖ್ಯಮಂತ್ರಿ ಡಾ ಅಶ್ವತ್ಥ ನಾರಾಯಣ್ ಅವರು ಒಡಂಬಡಿಕೆ ಮಾಡಿಕೊಂಡಿದ್ದಾರೆ. ಇದರನ್ವಯ 430 ಸರ್ಕಾರಿ ಕಾಲೇಜುಗಳಿಗೆ ಕಂಪ್ಯೂಟರ್ ನೀಡಲಾಗುತ್ತದೆ. ಕೊರೋನಾ ಬಳಿಕ ಡಿಜಿಟಲ್ ವ್ಯವಸ್ಥೆಯ ಬಳಕೆ ಹೆಚ್ಚಾಗಿದೆ. ಡಿಜಿಟಲ್ ಡಿವೈಡ್ ಸರಿಪಡಿಸುವ ನಿಟ್ಟಿನಲ್ಲಿ ಈ ಪ್ರಯತ್ನ ಪೂರಕವಾಗಿದೆ. ಸರ್ಕಾರಿ ಕಾಲೇಜುಗಳಿಗೂ ಕಂಪ್ಯೂಟರ್ಗಳ ಅಗತ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಸರ್ಕಾರಿ ಕಾಲೇಜುಗಳಿಗೆ ಸಂಬಂಧಿಸಿದಂತೆ ಸುಮಾರು 30 ಸಾವಿರ ಕಂಪ್ಯೂಟರ್ಗಳ ಅವಶ್ಯಕತೆ ಹೆಚ್ಚಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೂ ಪೂರಕ ಕ್ರಮ ಕೈಗೊಳ್ಳಲಾಗುತ್ತದೆ. ಇದಕ್ಕಾಗಿ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳೂ ಕೈಜೋಡಿಸುವಂತೆ ಮನವಿ ಮಾಡಿದರು. ಹಾಗೆಯೇ ಸರ್ಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರ ಕೊರತೆ ಸರಿದೂಗಿಸಲು ಕ್ರಮ ಕೈಗೊಳ್ಳುವ ಭರವಸೆಯನ್ನೂ ಅವರು ಇದೇ ಸಂದರ್ಭ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.