ಬೆಂಗಳೂರು: ಕಾವೇರಿ ನದಿಯೊಂದಿಗೆ ತಮಿಳುನಾಡಿನ ವೆಲ್ಲಾರು, ವೈಗೈ ಮತ್ತು ಗುಂಡಾರು ನದಿಗಳನ್ನು ಜೋಡಿಸುವ ಮೂಲಕ, ಕಾವೇರಿಯ ನೀರನ್ನು ಹೆಚ್ಚುವರಿಯಾಗಿ ಬಳಕೆ ಮಾಡುವುದಕ್ಕೆ ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ಈ ಯೋಜನೆಯನ್ನು ಮುಂದುವರಿಸಲು ತಮಿಳುನಾಡು ಸರ್ಕಾರಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆ.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಕಾನೂನು ತಜ್ಞರ ಜೊತೆಗೂ ಈ ಸಂಬಂಧ ಚರ್ಚೆ ನಡೆಸಿದ್ದು, ಕಾವೇರಿ ನದಿಯಿಂದ 45 ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಳಕೆ ಮಾಡಿಕೊಳ್ಳುವುದಕ್ಕೆ ಕರ್ನಾಟಕ ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ. ಇದನ್ನು ನ್ಯಾಯಾಲಯದಲ್ಲಿಯೂ ಕರ್ನಾಟಕ ಪ್ರಶ್ನೆ ಮಾಡಲಿದೆ. ಹೆಚ್ಚುವರಿ ನೀರನ್ನು ಎರಡು ರಾಜ್ಯಗಳ ನಡುವೆ ಹಂಚಿಕೆ ಮಾಡಲಾಗಿಲ್ಲ. ಈ ಎಲ್ಲಾ ನಿರ್ಧಾರಗಳು ಬಾಕಿ ಇರುವಾಗಲೇ ತಮಿಳುನಾಡು ಸರ್ಕಾರ ಇಂತಹ ಒಂದು ನಡೆಯನ್ನು ಪ್ರದರ್ಶಿಸಿರುವುದು ಸರಿಯಲ್ಲ ಎಂದು ಸರ್ಕಾರ ಅಭಿಪ್ರಾಯ ವ್ಯಕ್ತಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.