ಬೆಂಗಳೂರು: ಕೊರೋನಾ ಸಂಕಷ್ಟದ ಕಾರಣ ರಾಜ್ಯದಲ್ಲಿ ಈ ಬಾರಿ ಶಾಲಾ ಕಾಲೇಜುಗಳು ತಡವಾಗಿ ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷದ ಪಾಸುಗಳನ್ನು ಬಳಕೆ ಮಾಡಿ ಈ ಬಾರಿಯೂ ಬಸ್ಸುಗಳಲ್ಲಿ ಓಡಾಟ ನಡೆಸುವ ಅವಕಾಶವನ್ನು ಸಾರಿಗೆ ಇಲಾಖೆ ವಿದ್ಯಾರ್ಥಿಗಳಿಗೆ ನೀಡಿತ್ತು.
ಈ ಸಂಬಂಧ ಇದೀಗ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು, ಹಳೆಯ ಪಾಸುಗಳನ್ನು ಬಳಕೆ ಮಾಡಿ ಸಂಚರಿಸಲು ನೀಡಲಾಗಿದ್ದ ಅವಕಾಶದ ಅವಧಿಯನ್ನು ವಿಸ್ತರಣೆ ಮಾಡಿದ್ದಾರೆ. ಈ ಶೈಕ್ಷಣಿಕ ಅವಧಿಯಲ್ಲಿ ಶಾಲಾ ಕಾಲೇಜುಗಳಿಗೆ ದಾಖಲಾತಿ ಮಾಡಿಸಿಕೊಂಡ ರಸೀದಿಯನ್ನು ತೋರಿಸಿ, ಕಳೆದ ಶೈಕ್ಷಣಿಕ ವರ್ಷದ ಪಾಸುಗಳಲ್ಲಿಯೇ ಸಂಚರಿಸುವ ಅವಕಾಶವನ್ನು 2021 ರ ಮಾರ್ಚ್ 31 ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಕೊರೋನಾ ಬಳಿಕ ರಾಜ್ಯದಲ್ಲಿ ಶಾಲಾ ಕಾಲೇಜುಗಳು ಆರಂಭವಾದ ನಂತರದಲ್ಲಿ ಇಂತಹ ಒಂದು ವ್ಯವಸ್ಥೆಯನ್ನು ಸಾರಿಗೆ ಸಂಸ್ಥೆ ವಿದ್ಯಾರ್ಥಿಗಳಿಗೆ ಒದಗಿಸಿಕೊಟ್ಟಿತ್ತು. ಫೆ. 28 ರ ವರೆಗೆ ಸಂಸ್ಥೆಯಿಂದ ಪಡೆದ ಹಳೆಯ ಪಾಸುಗಳನ್ನೇ ಬಳಕೆ ಮಾಡಿ ಪ್ರಯಾಣಿಸಬಹುದು ಎಂದು ಈ ಹಿಂದೆ ಆದೇಶಿಸಿತ್ತು. ಇದೀಗ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವ್ಯವಸ್ಥೆಯನ್ನು ವಿಸ್ತರಿಸಿ ಮತ್ತೆ ಆದೇಶ ಹೊರಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.