ನವದೆಹಲಿ: ದೇಶದಲ್ಲಿ ಈವರೆಗೆ 1.37 ಕೋಟಿಗೂ ಅಧಿಕ ಕೋವಿಡ್-19 ಲಸಿಕೆ ಡೋಸ್ಗಳನ್ನು ನೀಡಲಾಗಿದೆ. ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಡಾ. ಮಂದೀಪ್ ಭಂಡಾರಿ ಈ ಬಗ್ಗೆ ಮಾಹಿತಿಯನ್ನು ನೀಡಿ, 88.41 ಲಕ್ಷ ಆರೋಗ್ಯ ಕಾರ್ಯಕರ್ತರು ಮತ್ತು 49.15 ಲಕ್ಷ ಮುಂಚೂಣಿ ಕಾರ್ಮಿಕರು ಈವರೆಗೆ ಲಸಿಕೆಗಳನ್ನು ಪಡೆದಿದ್ದಾರೆ ಎಂದಿದ್ದಾರೆ.
ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಇದುವರೆಗೆ ಶೇ.80ರಷ್ಟು ಲಸಿಕೆ ನೀಡಲಾಗಿದೆ. ಶೇ.60ರಷ್ಟು ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ ಎಂದಿದ್ದಾರೆ.
ನಿನ್ನೆ 2.84 ಲಕ್ಷ ಲಸಿಕೆಗಳನ್ನು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನಿರ್ವಾಹಕರು ಮತ್ತು ಕಾರ್ಯಕ್ರಮ ವ್ಯವಸ್ಥಾಪಕರಿಗೆ ಕೋ-ವಿನ್ 2.0 (ಎರಡನೇ ಹಂತದ ಲಸಿಕೆ) ಗಾಗಿ ತರಬೇತಿ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
60 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಮತ್ತು ಅನಾರೋಗ್ಯ ಹೊಂದಿರುವ 45 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಕೋವಿಡ್-19 ವ್ಯಾಕ್ಸಿನೇಷನ್ ಮುಂದಿನ ಸೋಮವಾರದಿಂದ ಪ್ರಾರಂಭವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.