ಬೆಂಗಳೂರು: ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಎಚ್ಚೆತ್ತುಕೊಂಡಿರುವ ಕರ್ನಾಟಕ ಲೋಕಸೇವಾ ಆಯೋಗ ಎಫ್ಡಿಎ ಹುದ್ದೆಗಳ ನೇಮಕಾತಿಯ ಸಲುವಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಯುಪಿಎಸ್ಸಿಯ ಮಾದರಿಯ ಪರೀಕ್ಷಾ ವ್ಯವಸ್ಥೆಗಳನ್ನು ಅಳವಡಿಸಲು ಮುಂದಾಗಿದೆ.
ಜ. 24 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆಯ ಸೋರಿಕೆಯ ಕಾರಣದಿಂದ ಮುಂದೂಡಲಾಗಿತ್ತು. ಫೆ. 28 ರಂದು ಮುಂದೂಡಲ್ಪಟ್ಟ ಪರೀಕ್ಷೆಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್ ಜಾಮರ್ ಅಳವಡಿಸಲು ಕೆಪಿಎಸ್ಸಿ ತೀರ್ಮಾನಿಸಿದೆ. 1,253 ಎಫ್ಡಿಎ ಹುದ್ದೆಗಳಿಗೆ 3 ಲಕ್ಷದ 73 ಸಾವಿರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ರಾಜ್ಯದ 1,053 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಈ ಪೈಕಿ 443 ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರಗಳು ಎಂದು ಪರಿಗಣಿಸಲಾಗಿದೆ.
ಪರೀಕ್ಷೆ ನಡೆಯುವ ಕೇಂದ್ರದೊಳಗೆ ಸ್ಮಾರ್ಟ್ಫೋನ್ ನಿಷೇಧಿಸಲಾಗಿದೆ. ಜೊತೆಗೆ ಯಾವುದೇ ಎಲೆಕ್ಟ್ರಾನಿಕ್ ಚಿಪ್ಗಳು, ಲೋಹದ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ ಎಂಬುದಾಗಿಯೂ ಸೂಚಿಸಲಾಗಿದೆ. ಮಹಿಳಾ ಅಭ್ಯರ್ಥಿಗಳು ಕಿವಿಯೋಲೆಗಳನ್ನೂ ಧರಿಸುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. ಪರೀಕ್ಷೆಯ ವೇಳೆಯಲ್ಲಿ ಅಧಿಕಾರಿಗಳು ಕೊಠಡಿಗೆ ತೆರಳಿ ಪರಿಶೀಲಿಸಲಿದ್ದಾರೆ ಎಂಬುದಾಗಿಯೂ ಅವರು ಹೇಳಿದ್ದಾರೆ.
ಹಾಗೆಯೇ ಪರೀಕ್ಷಾ ಸಾಮಗ್ರಿಗಳನ್ನು ಗೌಪ್ಯವಾಗಿಡಲು ಪಿಯುಸಿ ಪರೀಕ್ಷಾ ಮಂಡಳಿಯ ಕರ್ನಾಟಕ ಸೆಕ್ಯೂರ್ಡ್ ಎಕ್ಸಾಮಿನೇಷನ್ ಸಿಸ್ಟಂ ಅಳವಡಿಸಿಕೊಳ್ಳಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ಇರುವ ವಸ್ತುಗಳನ್ನು ಸಾಗಿಸುವುದಕ್ಕಾಗಿ ಬಳಕೆ ಮಾಡುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪ್ರತ್ಯೇಕ ಸಂಚಾರಿ ಪೊಲೀಸ್ ದಳಗಳನ್ನು ನಿಯೋಜಿಸಲು ಸೂಚಿಸಿರುವುದಾಗಿಯೂ ಕೆಪಿಎಸ್ಸಿ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.