ಮಂಗಳೂರು: 2020-21 ನೇ ಸಾಲಿನ ಮಂಗಳೂರು ಮಂಗಳಗಂಗೋತ್ರಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆ ನಡೆದಿದ್ದು, ಎಬಿವಿಪಿ ಅಭ್ಯರ್ಥಿಗಳು ಆರಕ್ಕೆ ಆರೂ ಸ್ಥಾನಗಳಲ್ಲಿ ಗೆದ್ದು, ವಿಜಯದ ನಗೆ ಬೀರಿದ್ದಾರೆ.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಕಾಶ್ ರಾಜ್, ಉಪಾಧ್ಯಕ್ಷ ಸ್ಥಾನಕ್ಕೆ ನಿಧಿ ಶೆಟ್ಟಿ, ಕಾರ್ಯದರ್ಶಿಯಾಗಿ ಸಂತೋಷ್ ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ಸನತ್ ಗೌಷಿಕ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಕ್ಷಾ ಡಿ ಸಾಲ್ಯಾನ್, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿಯಾಗಿ ಆಶಿಕಾ ಅವರು ಆಯ್ಕೆಯಾಗಿದ್ದಾರೆ.
ಈ ಸಂಬಂಧ ಮಾತನಾಡಿರುವ ವಿದ್ಯಾರ್ಥಿ ಸಂಘದ ನಾಯಕ ಆಕಾಶ್ ರಾಜ್, ʼಈ ಗೆಲುವು ಸಂತಸ ನೀಡಿದೆ. ನಮ್ಮ ವಿರುದ್ಧ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳಿಂದ ಕಠಿಣ ಸ್ಪರ್ಧೆ ನಿರೀಕ್ಷಿಸಿದ್ದೆವು. ಈ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕರ್ತರ ಸಂಘಟಿತ ಹೋರಾಟ ನಡೆಸಲು ನಿರ್ಧರಿಸಿ, ಅದಕ್ಕಾಗಿ ಪ್ರಯತ್ನ ನಡೆಸಿದ್ದೆವು. ಉತ್ತಮ ಉದ್ದೇಶವನ್ನಿಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದೆವು. ಸಂಘಟಿತ ಹೋರಾಟದ ಫಲ ಎಂಬಂತೆ ಆರಕ್ಕೆ ಆರೂ ಸ್ಥಾನಗಳಿಗೆ ನಮ್ಮ ಸಹಪಾಠಿಗಳು ಎಬಿವಿಪಿ ಅಭ್ಯರ್ಥಿಗಳಿಗೇ ಮತ ಚಲಾಯಿಸಿದ್ದಾರೆ. ಆ ಮೂಲಕ ಗೆಲುವು ನೀಡಿದ್ದಾರೆ. ಇದು ನಮ್ಮ ಗೆಲುವಲ್ಲ, ಬದಲಾಗಿ ವಿದ್ಯಾರ್ಥಿಗಳ ಗೆಲುವುʼ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.