ಬೆಂಗಳೂರು: ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಜನತೆಗೆ ಉತ್ತಮ ಬಜೆಟ್ ನೀಡುತ್ತೇನೆ. ಸಾರ್ವಜನಿಕರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದ ಜನರ ಸಂಕಷ್ಟಗಳು ನಿವಾರಣೆಯಾಗಿ ಉತ್ತಮ ಜೀವನ ನಡೆಸಬೇಕು ಎಂಬುದೇ ರಾಜ್ಯ ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಬಜೆಟ್ನಲ್ಲಿಯೂ ಜನರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದ ಜನರ ಶ್ರೇಯೋಭಿವೃದ್ಧಿಗಾಗಿ ಉತ್ತಮ ಬಜೆಟ್ ಮಂಡಿಸುವ ಭರವಸೆಯನ್ನೂ ಅವರು ಈ ಸಂದರ್ಭದಲ್ಲಿ ನೀಡಿದ್ದಾರೆ.
ಇಂದು ಸಿಎಂ ಯಡಿಯೂರಪ್ಪ ಅವರು ತಮ್ಮ ಜನ್ಮ ದಿನಾಚರಣೆಯ ಸಲುವಾಗಿ ಚಾಮುಂಡೇಶ್ವರಿಯ ಸನ್ನಿಧಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಯಡಿಯೂರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಕೇಂದ್ರದ ಹಲವು ನಾಯಕರು, ರಾಜ್ಯದ ನಾಯಕರು ಶುಭಾಶಯಗಳನ್ನು ಕೋರಿದ್ದಾರೆ.
Greetings to Karnataka CM @BSYBJP Ji on his birthday. Yediyurappa Ji is one of our most experienced leaders, who has devoted his life towards the welfare of farmers and empowering the poor. Praying for his long and healthy life.
— Narendra Modi (@narendramodi) February 27, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.