ಕೊಪ್ಪಳ: ರಾಜ್ಯದಲ್ಲಿ ಗಣಿಗಾರಿಕೆಗೆ ಸಂಬಂಧಿಸಿದಂತೆ ನೂತನ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದು ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಕೆಲವು ದಿನಗಳ ಹಿಂದಷ್ಟೇ ನಡೆದ ಸ್ಫೋಟದ ಬಳಿಕ, ಈಗಾಗಲೇ ಹೊಂದಿರುವ ಸ್ಪೋಟಕಗಳನ್ನು ಗಣಿ ಇಲಾಖೆಗೆ ಒಪ್ಪಿಸುವಂತೆ ಗಣಿ ಮಾಲೀಕರಿಗೆ ಸೂಚನೆಯನ್ನು ನೀಡಲಾಗಿದೆ. ಈ ಸೂಚನೆಯನ್ನು ಪಾಲಿಸದ ಗಣಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಿರಾಣಿ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ಸಂಭವಿಸಿದ ಸ್ಪೋಟದ ಕಾರಣದಿಂದಲೇ ಅಕ್ರಮವಾಗಿ ಹೊಂದಿರುವ ಸ್ಫೋಟಕಗಳನ್ನು ಬೇರೆಡೆಗೆ ಸಾಗಿಸುವ ಪ್ರಯತ್ನ ನಡೆಯುತ್ತಿದೆ. ಚಿಕ್ಕಬಳ್ಳಾಪುರದಲ್ಲಿಯೂ ಇದರಿಂದಲೇ ಸ್ಫೋಟ ಸಂಭವಿಸಿದೆ. ಈ ಬಗ್ಗೆ ಸರ್ಕಾರ ಹೆಚ್ಚು ನಿಗಾ ವಹಿಸುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.