ನವದೆಹಲಿ: ಪೆಟ್ರೋಲ್ ಮತ್ತು ಡಿಸೇಲ್ ದರ ದೇಶದಾದ್ಯಂತ ವಿಪರೀತ ಏರಿಕೆ ಹಿನ್ನಲೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ.
ಪ್ರಸ್ತುತ ಏರುತ್ತಿರುವ ಇಂಧನ ದರ ಸಾಮಾನ್ಯ ವರ್ಗದ ಜನರಿಗೆ ಹೊರೆಯಾಗಿ ಪರಿಣಮಿಸಿದೆ. ಸಾಮಾನ್ಯವಾಗಿ ಇಂಧನ ದರ ಏರಿಕೆಯಾದಾಗ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವುದು ಸಾಮಾನ್ಯ ಸಂಗತಿಯಾಗಿದೆ. ಇಂಧನ ಬೆಲೆ ಏರಿಕೆ ಕುರಿತಂತೆ ಮಾತನಾಡಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಚಳಿಗಾಲ ಮುಗಿದ ಮೇಲೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಬೆಲೆ ಇಳಿಕೆಯಾಗಲಿದೆ ಎಂಬ ಭರವಸೆಯನ್ನು ನೀಡಿದ್ದಾರೆ.
ಸದ್ಯ ಬೇಡಿಕೆಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಆಗುತ್ತಿದೆ. ಚಳಿಗಾಲ ಮುಗಿದ ಮೇಲೆ ಸ್ವಲ್ಪ ಮಟ್ಟಿಗೆ ಇಳಿಕೆ ಆಗಲಿದೆ ಎಂದು ತಿಳಿಸಿದ್ದಾರೆ. ಕಳೆದ 54 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 25 ಬಾರಿ ಹೆಚ್ಚಾಗಿದೆ. ಜನವರಿ 1 ರಿಂದೀಚೆಗೆ 7.68 ರೂಪಾಯಿ ಹೆಚ್ಚಾಗಿದೆ. ಫೆಬ್ರವರಿ ತಿಂಗಳಲ್ಲಿ 15ನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗಿದೆ. ಕಳೆದ 18 ದಿನಗಳಿಂದ 4.72 ಪೈಸೆ ಬೆಲೆ ಹೆಚ್ಚಳ ಮಾಡಲಾಗಿದೆ. ಇದು ಜನಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.