ನವದೆಹಲಿ: ಖಾಸಗಿ ಆಸ್ಪತ್ರೆಗಳು ಕೋವಿಡ್-19 ಲಸಿಕೆಯ ಡೋಸೇಜ್ಗೆ 250 ರೂ. ವರೆಗೆ ಶುಲ್ಕ ವಿಧಿಸಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಘೋಷಿಸಿದೆ.
ಭಾರತವು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಅಸ್ವಸ್ಥತೆ ಹೊಂದಿರುವ 45-59 ವಯಸ್ಸಿನವರಿಗೆ ಮಾರ್ಚ್ 1 ರಿಂದ ಲಸಿಕೆ ನೀಡಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ಪಡೆಯುವ ಅವಕಾಶ ನೀಡಲಾಗಿದೆ. ಆದರೆ ಇದಕ್ಕೆ ಶುಲ್ಕ ನೀಡಬೇಕಾಗುತ್ತದೆ.
ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳಾಗಿ (ಸಿವಿಸಿ) ಕಾರ್ಯನಿರ್ವಹಿಸುವ ಖಾಸಗಿ ಆಸ್ಪತ್ರೆಗಳು ಪ್ರತಿ ಡೋಸ್ಗೆ 250 ರೂ. ಶುಲ್ಕವನ್ನು ಪಡೆಯಬಹುದು ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.
ಕೋವಿಡ್-19 ವ್ಯಾಕ್ಸಿನೇಷನ್ ವಿಸ್ತರಣೆ ಮಾಡುವ ಸಲುವಾಗಿ ಸರ್ಕಾರವು ಹೆಚ್ಚಿನ ಸಂಖ್ಯೆಯ ಖಾಸಗಿ ಸೌಲಭ್ಯಗಳನ್ನು ಅಭಿಯಾನದಲ್ಲಿ ಒಳಪಡಿಸುತ್ತಿದೆ. ಆಯುಷ್ಮಾನ್ ಭಾರತ್-ಪಿಎಂಜೆಎವೈ ಅಡಿಯಲ್ಲಿ ಸುಮಾರು 10,000 ಆಸ್ಪತ್ರೆಗಳು ಮತ್ತು ಸಿಜಿಹೆಚ್ಎಸ್ ಅಡಿಯಲ್ಲಿ 687 ಆಸ್ಪತ್ರೆಗಳನ್ನು ರಾಜ್ಯಗಳು ಸಿವಿಸಿಗಳಾಗಿ ಬಳಸಬಹುದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.