ನವದೆಹಲಿ: ದೆಹಲಿಯ ಏಮ್ಸ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಕೋವಿಡ್ -19 ಲಸಿಕೆಯ ಮೊದಲ ಡೋಸ್ ಅನ್ನು ಹಾಕಿಸಿಕೊಂಡಿದ್ದಾರೆ. ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಎರಡನೇ ಹಂತದ ಅಭಿಯಾನ ಆರಂಭಗೊಂಡಿದೆ.
ಪ್ರಧಾನಮಂತ್ರಿ ಟ್ವಿಟರ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ” ಏಮ್ಸ್ನಲ್ಲಿ ನಾನು ಮೊದಲ ಡೋಸ್ ಕೋವಿಡ್-19 ಲಸಿಕೆಯನ್ನು ತೆಗೆದುಕೊಂಡೆ. ಕೋವಿಡ್-19 ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ತ್ವರಿತಗತಿಯಲ್ಲಿ ಕೆಲಸ ಮಾಡುತ್ತಿರುವುದು ಗಮನಾರ್ಹ. ಲಸಿಕೆ ತೆಗೆದುಕೊಳ್ಳುವಂತೆ ಎಲ್ಲಾ ಅರ್ಹರಿಗೂ ನಾನು ಮನವಿ ಮಾಡುತ್ತೇನೆ. ಒಗ್ಗಟ್ಟಾಗಿ, ನಾವು ಭಾರತವನ್ನು ಕೋವಿಡ್-19 ಮುಕ್ತಗೊಳಿಸೋಣ” ಎಂದಿದ್ದಾರೆ.
ವರದಿಗಳ ಪ್ರಕಾರ, ಪುದುಚೇರಿಯ ಸಿಸ್ಟರ್ ಪಿ ನಿವೇದಾ ಅವರು ಭಾರತ್ ಬಯೋಟೆಕ್ನ ಕೋವಾಕ್ಸಿನ್ ಅನ್ನು ಪಿಎಂ ಮೋದಿಗೆ ನೀಡಿದ್ದಾರೆ. 2021 ರ ಜನವರಿ 16 ರಂದು ಕೋವಿಡ್ -19 ವ್ಯಾಕ್ಸಿನೇಷನ್ ಅಭಿಯಾನ ದೇಶವ್ಯಾಪಿಯಾಗಿ ಮೊದಲ ಹಂತವಾಗಿ ಆರಂಭಗೊಂಡಿತು.
60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 45 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಕೊಮೊರ್ಬಿಡಿಟಿ ಹೊಂದಿರುವ ಜನರಿಗಾಗಿ ಎರಡನೇ ಹಂತವನ್ನು ಮೀಸಲಿಡಲಾಗಿದೆ. ಸೋಮವಾರ ಬೆಳಿಗ್ಗೆ 9 ಗಂಟೆಗೆ ಸರ್ಕಾರದ ಕೋ-ವಿನ್ 2.0 ಪೋರ್ಟಲ್ನಲ್ಲಿ ಜನರು ತಮ್ಮನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಬಹುದಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ 250 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ. ಸರ್ಕಾರಿ ಆಸ್ಪತ್ರೆಯಲ್ಲಿ ಇದು ಉಚಿತವಾಗಿದೆ.
Took my first dose of the COVID-19 vaccine at AIIMS.
Remarkable how our doctors and scientists have worked in quick time to strengthen the global fight against COVID-19.
I appeal to all those who are eligible to take the vaccine. Together, let us make India COVID-19 free! pic.twitter.com/5z5cvAoMrv
— Narendra Modi (@narendramodi) March 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.