ಹುಬ್ಬಳ್ಳಿ: ರಾಜ್ಯದ ಶಾಲೆಗಳಲ್ಲಿ ಬಿಸಿಯೂಟ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ.
ನವಲಗುಂದದ ಬೆಳವಟಗಿಯಲ್ಲಿ ʼರೈತರೊಂದಿಗೆ ಒಂದು ದಿನʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾರಕ್ಕೆ ಒಂದು ಬಾರಿಯಂತೆ ಶಾಲೆಗಳಲ್ಲಿ ಬಿಸಿಯೂಟ ಮತ್ತು ಹಾಸ್ಟೆಲ್ಗಳಲ್ಲಿರುವ ವಿದ್ಯಾರ್ಥಿಗಳಿಗೆ ಸಿರಿಧಾನ್ಯಗಳನ್ನು ಬಳಕೆ ಮಾಡಿ ಆಹಾರ ತಯಾರಿಸಿ ನೀಡಲಾಗುವುದು. ಮೊದಲ ಹಂತದಲ್ಲಿ ಕೃಷಿ ವಿವಿಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಿರಿಧಾನ್ಯದ ಆಹಾರಗಳನ್ನು ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ರಾಜ್ಯದ ರೈತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇದು ಸಹಕಾರಿಯಾಗಲಿದೆ. ರೈತರ ಬೆಳೆಗಳಿಗೂ ಇದರಿಂದ ಉತ್ತಮ ಆದಾಯ ದೊರೆಯಲಿದೆ. ರೈತರ ಸಬಲೀಕರಣಕ್ಕೆ ಈ ಕ್ರಮ ಪೂರಕವಾಗಿರಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.