ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಮೂಗೂರು ಕೆರೆ ತುಂಬಿಸುವ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು.
ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿನ ನೀರಾವರಿ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಈ ಯೋಜನೆ 105 ಕೋಟಿ ಕೋಟಿ ರೂ. ವೆಚ್ಚದ್ದಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 234 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಮುಖ್ಯಮಂತ್ರಿ @BSYBJP ರವರು ನಿನ್ನೆ ಸೊರಬ ತಾಲೂಕಿನ ಆನವಟ್ಟಿಯಲ್ಲಿ105 ಕೋಟಿ ರೂ. ವೆಚ್ಚದ ಮೂಗೂರು ಕೆರೆ ತುಂಬಿಸುವ ಯೋಜನೆ ಲೋಕಾರ್ಪಣೆ ಮಾಡಿದರು.
ನಗರಾಭಿವೃದ್ಧಿ ಸಚಿವ @BABasavaraja, ಲೋಕಸಭಾ ಸದಸ್ಯ @BYRBJP, ಶಾಸಕ @kumarbangarappa, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. pic.twitter.com/XqXKFPJ2EO
— CM of Karnataka (@CMofKarnataka) March 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.