ಬೆಂಗಳೂರು: ಮುಂಬರುವ ಉಪಚುನಾವಣೆಯಲ್ಲಿ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ನೂರಕ್ಕೆ ನೂರರಷ್ಟು ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಬಿಜೆಪಿ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ಪಕ್ಷ ಈ ವರೆಗೆ ನಿರ್ವಹಿಸಿರುವ ಕೆಲಸಗಳನ್ನು ಗಮನದಲ್ಲಿಟ್ಟುಕೊಂಡು ಜನರು ಬಿಜೆಪಿಗೆ ಮತ ನೀಡಲಿದ್ದಾರೆ. ನಾಲ್ಕೂ ಕ್ಷೇತ್ರಗಳಲ್ಲಿ ಬಿಜಿಪಿ ಗೆಲುವು ಸಾಧಿಸುತ್ತದೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಸಿಎಂ ಹೇಳಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರ ಸೇರಿ 3 ಕ್ಷೇತ್ರಗಳಿಗೆ ಯಾವುದೇ ಸಂದರ್ಭದಲ್ಲಿ ಉಪಚುನಾವಣೆ ನಡೆದರೂ ಬಿಜೆಪಿ ಚುನಾವಣೆ ಎದುರಿಸಲು ಸಿದ್ಧ. ಅಭ್ಯರ್ಥಿಗಳ ಆಯ್ಕೆ ಪ್ರಶ್ನೆಯನ್ನು ಪಕ್ಷದ ಮುಖಂಡರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಬಜೆಟ್ಗೆ ಸಂಬಂಧಿಸಿಂತೆಯೂ ಈ ಸಂದರ್ಭ ಮಾತನಾಡಿದ ಅವರು, ಬಜೆಟ್ ಕುರಿತಾಗಿ ಎಲ್ಲಾ ಇಲಾಖೆಗಳ ಜೊತೆಗೂ ಈಗಾಗಲೇ ಸಭೆ ನಡೆಸಲಾಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ವಾಪಾಸ್ಸಾದ ಬಳಿಕ ಈ ಬಜೆಟ್ ಸಿದ್ಧತೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.