ಬೆಂಗಳೂರು: ರಾಜ್ಯದಲ್ಲಿ ಸಹಕಾರಿ ಸಂಘಗಳ ಮುಖೇನ 3 ಲಕ್ಷ ರೂ ವರೆಗಿನ ಬೆಳೆ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಮತ್ತು 10 ಲಕ್ಷ ರೂ. ವರೆಗಿನ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲವನ್ನು 3% ಬಡ್ಡಿದರದಲ್ಲಿ ವಿತರಣೆ ಮಾಡಲಾಗುತ್ತಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.
2020-21 ನೇ ಸಾಲಿಗೆ ಸಂಬಂಧಿಸಿದಂತೆ 24.50 ಲಕ್ಷ ಕೃಷಿಕರಿಗೆ 14,500 ಕೋಟಿ ರೂ. ಅಲ್ಪಾವಧಿ ಸಾಲ, 70 ಲಕ್ಷ ರೈತರಿಗೆ 1200 ಕೋಟಿ ಮಧ್ಯಮಾವಧಿ ಸಾಲ, ದೀರ್ಘಾವಧಿ ಸಾಲ ವಿತರಣೆಯ ಗುರಿ ಹೊಂದಲಾಗಿದೆ. ಈ ವರೆಗೆ ಒಟ್ಟು 21.64 ಲಕ್ಷ ರೈತರಿಗೆ 14179.22 ಕೋಟಿ ರೂ. ಗಳ ಅಲ್ಪಾವಧಿ ಸಾಲ, 0.36 ಲಕ್ಷ ರೈತರಿಗೆ 800.51 ಕೋಟಿ ರೂ. ಮಧ್ಯಮಾವಧಿ, ದೀರ್ಘಾವಧಿ ಬೆಲೆ ಸಾಲ ವಿತರಿಸಿ, 90.56% ಗಳಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದ್ದಾರೆ.
ಪಶುಸಂಗೋಪನೆ, ಮೀನುಗಾರರಿಗೆ ಸಂಬಂಧಿಸಿದಂತೆಯೂ ದುಡಿಯುವ ಬಂಡವಾಳಕ್ಕಾಗಿ ಸಾಲ ವಿತರಿಸಲಾಗಿದೆ. ರಾಜ್ಯದಲ್ಲಿ ಮಹಿಳೆಯರು ಆರ್ಥಿಕವಾಗಿ ಸಬಲರಾಗುವಂತೆ ಮಾಡುವ ದೃಷ್ಟಿಯಿಂದ ಈ ವರೆಗೆ ಸಹಕಾರ ಕ್ಷೇತ್ರದಲ್ಲಿ 2.5 ಲಕ್ಷ ಸ್ತ್ರೀ ಶಕ್ತಿ/ಸ್ವಸಹಾಯ ಗುಂಪುಗಳನ್ನು ರಚನೆ ಮಾಡಲಾಗಿದ್ದು, ಡಿಸಿಸಿ ಬ್ಯಾಂಕ್, ಫ್ಯಾಕ್ಸ್ಗಳ ಮೂಲಕ ಮಹಿಳಾ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ. ಗಳ ವರೆಗೆ ಮತ್ತು ಪುರುಷರಿಗೆ 4% ಬಡ್ಡಿದರದಲ್ಲಿ ಸಾಲ ವಿತರಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.