ಬೆಂಗಳೂರು: ರಾಜ್ಯದಲ್ಲಿ ಮೂರನೇ ಹಂತದ ಕೊರೋನಾ ಲಸಿಕೆ ವಿತರಣೆ ಆರಂಭವಾಗಿದ್ದು, ಯಾರಿಗೆ ಎಲ್ಲಿ ಲಸಿಕೆಯ ಡೋಸ್ ಪಡೆದುಕೊಳ್ಳುವ ಅವಕಾಶ ಸಿಗುತ್ತದೆಯೋ ಅವರು ಅಲ್ಲೇ ಲಸಿಕೆಗಳನ್ನು ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಸಂಬಂಧ ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಇನ್ನೆರಡು ದಿನಗಳಲ್ಲಿ ತಾವೂ ಲಸಿಕೆ ಪಡೆಯುವುದಾಗಿ ತಿಳಿಸಿದ್ದಾರೆ. ಮಾರ್ಚ್ 8 ರಂದು ಬಜೆಟ್ ಮಂಡಿಸಲಾಗುತ್ತದೆ. ಈ ಬಜೆಟ್ನ ಸಂಪೂರ್ಣ ಫಲ ರಾಜ್ಯದ ಜನತೆಗೆ ದೊರೆಯಲಿದೆ. ಈ ಬಾರಿಯ ಬಜೆಟ್ ಎಲ್ಲಾ ವರ್ಗದ ಜನರಿಗೂ ಅನುಕೂಲ ಒದಗಿಸಲಿದೆ ಎಂದು ಅವರು ಹೇಳಿದ್ದಾರೆ.
ಕಳೆದ ಸೋಮವಾರ ದೇಶದೆಲ್ಲೆಡೆ ಮೂರನೇ ಹಂತದ ಕೊರೋನಾ ಲಸಿಕೆ ವಿತರಣೆ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ರಿಂದ 59 ವರ್ಷದೊಳಗಿನ ಅನಾರೋಗ್ಯ ಪೀಡಿತರಿಗೆ ಈ ಲಸಿಕೆಯನ್ನು ನೀಡಲಾಗುತ್ತಿದೆ. ಅಲ್ಲದೆ ಕೊರೋನಾ ಲಸಿಕೆ ಪಡೆಯುವ ಸ್ಥಳದಲ್ಲಿಯೇ ನೋಂದಣಿ ಮಾಡಿಕೊಳ್ಳುವ ಅವಕಾಶವಿರುವುದಾಗಿಯೂ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.