ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪಡೆ ಕೆಎಸ್ಆರ್ಪಿಯ ಮಹಿಳಾ ಬೆಟಾಲಿಯನ್ನ ಸಿಬ್ಬಂದಿಗಳು ಇನ್ನು ಮುಂದೆ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿನಿಯರಿಗೆ ಸ್ವರಕ್ಷಣಾ ತರಬೇತಿ ನೀಡಲಿದ್ದಾರೆ.
ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಬಾಲಕಿಯರಿಗೆ ಇನ್ನು ಮುಂದೆ ಸ್ವರಕ್ಷಣಾ ತರಬೇತಿಯನ್ನು ಕೆಎಸ್ಆರ್ಪಿ ಸಿಬ್ಬಂದಿಗಳು ನಡೆಸಿ ಕೊಡಲಿದ್ದು, ಈ ಸ್ವರಕ್ಷಣಾ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಾರ್ಚ್ 9 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಭಾಗವಾಗಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮವನ್ನು ಬೆಳಗಾವಿಯ ಆಯ್ದು 15 ಸರ್ಕಾರಿ ಶಾಲೆಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಆರಂಭಿಸಲಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿದ ಕೆಎಸ್ಆರ್ಪಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರು, ‘ಈ ತರಗತಿಗಳು ಯುವತಿಯರಿಗೆ ಮತ್ತು ವಿಶೇಷವಾಗಿ ಗ್ರಾಮೀಣ ಮಕ್ಕಳಿಗೆ ಅವರ ಆತ್ಮವಿಶ್ವಾಸ ಮತ್ತು ಸ್ವಾಭಿಮಾನವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಶಾಲೆಗಳು ಮತ್ತು ಕಾಲೇಜುಗಳು ಮಾತ್ರವಲ್ಲ, ಪೊಲೀಸ್ ಸಿಬ್ಬಂದಿಗಳ ಮಕ್ಕಳು ಮತ್ತು ಮಹಿಳಾ ಸದಸ್ಯರಿಗೆ ಸಹ ಆತ್ಮರಕ್ಷಣೆ ತರಬೇತಿ ನೀಡಲಾಗುವುದು ಎಂದು ಹೇಳಿದರು.
ಗ್ರಾಮೀಣ ಮಟ್ಟದ ಬಾಲಕಿಯರಲ್ಲಿ ಆತ್ಮಸ್ಥೈರ್ಯ ತುಂಬುವ ಸರ್ಕಾರದ ಈ ಪ್ರಯತ್ನ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.