ಬೆಂಗಳೂರು: ಕರ್ನಾಟಕದ 15ನೇ ವಿಧಾನಸಭೆಯ 9ನೇ ಅಧಿವೇಶನ ಇಂದಿನಿಂದ ಆರಂಭಗೊಂಡಿದೆ.
ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುವುದರೊಂದಿಗೆ ಅಧಿವೇಶನ ಬೆಳಿಗ್ಗೆ 11 ಗಂಟೆಗೆ ಆರಂಭವಾಗಿದೆ.
ಈ ಬಾರಿ ಒಟ್ಟು 19 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನ ʼಒಂದು ರಾಷ್ಟ್ರ- ಒಂದು ಚುನಾವಣೆʼ ಬಗ್ಗೆ ಚರ್ಚೆ ನಡೆಯಲಿದ್ದು, ಮಾರ್ಚ್ 8 ರಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು 2021-2022 ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಸೋಮವಾರ ಬೆಳಿಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಸಕ್ತ ಸಾಲಿನ ರಾಜ್ಯ ಆಯವ್ಯಯ ಮಂಡನೆ ಮಾಡಲಿದ್ದಾರೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಹೇಳಿದ್ದಾರೆ.
ಮಾ. 4ರಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಮೊದಲ 2 ದಿನ ʼಒಂದು ರಾಷ್ಟ್ರ- ಒಂದು ಚುನಾವಣೆʼ ಕುರಿತು ಚರ್ಚೆ ನಡೆಯಲಿದೆ. ಮಾ. 8 ರಂದು ಬಜೆಟ್ ಮಂಡನೆಯಾಗಲಿದ್ದು, ಅನಂತರ ಮಾ. 31ರ ವರೆಗೆ ಬಜೆಟ್ ಮೇಲಿನ ಚರ್ಚೆ, ಸರಕಾರದ ಉತ್ತರ, ಪ್ರಶ್ನೋತ್ತರ ಕಲಾಪಗಳು ಇರಲಿವೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.