ಮೈಸೂರು : ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಬುಧವಾರ ನಡೆದಿದೆ.
ಹೆಚ್.ಡಿ ಕೋಟೆ ತಾಲೂಕಿನ ಅಂತರಸಂತೆ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಕಿಯ ಜ್ವಾಲೆಗೆ ಸಾಕಷ್ಟು ಮರಗಳು ಸುಟ್ಟು ಭಸ್ಮವಾಗಿದೆ. ಈ ಘಟನೆಯು ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದೆ ಎನ್ನಲಾಗಿದೆ.
ಈ ಅಗ್ನಿ ದುರಂತ ಸಂಪೂರ್ಣ ಕಾಡಿಗೆ ಹಬ್ಬಿಕೊಳ್ಳುವ ಮೊದಲೇ ಅರಣ್ಯಾಧಿಕಾರಿಗಳು ಸಮಯೋಜಿತವಾಗಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಇದೇ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದರು. ಇದೀಗ ಸ್ಥಳದಲ್ಲಿ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಳೆದ ಒಂದು ವಾರದಿಂದ ಅರಣ್ಯ ಪ್ರದೇಶದ ವಿವಿಧ ಭಾಗಗಳಲ್ಲಿ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇವೆ. ಈಗಾಗಿ ಇಲ್ಲಿ ವಾಸಿಸುವ ಕೆಲ ಬುಡಕಟ್ಟು ಜನಾಂಗದವರು ತಮ್ಮ ಅಳಲನ್ನು ಅಧಿಕಾರಿಗಳಲ್ಲಿ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.