ನವದೆಹಲಿ: ವಾಸ ಮಾಡಲು ಅತ್ಯುತ್ತಮ ನಗರಗಳ ಪಟ್ಟಿಯಲ್ಲಿ ಪುಣೆಯನ್ನು ಹಿಂದಿಕ್ಕಿ ರಾಜ್ಯ ರಾಜಧಾನಿ ಬೆಂಗಳೂರು ಅತ್ಯುತ್ತಮ ನಗರವಾಗಿ ಹೊರಹೊಮ್ಮಿದೆ.
2020 ರಲ್ಲಿ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯವು ದೇಶದಲ್ಲಿರುವ 10 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇರುವ 50 ಕ್ಕೂ ಹೆಚ್ಚು ನಗರಗಳನ್ನು ಒಳಗೊಂಡು ನಡೆಸಿದ ಸುಲಲಿತ ಜೀವನ ಸೂಚ್ಯಂಕ ವರದಿಯಲ್ಲಿ ದೇಶದ ಪ್ರಮುಖ ನಗರಗಳಾದ ಮುಂಬಯಿ, ಅಹಮದಬಾದ್, ಚೆನ್ನೈ ಮುಂತಾದ ನಗರಗಳನ್ನು ಹಿಂದಿಕ್ಕಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.
ಒಂದು ದಶಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ 62 ನಗರಗಳಲ್ಲಿ, ಶಿಮ್ಲಾ ಅಗ್ರಸ್ಥಾನದಲ್ಲಿದೆ, ಭುವನೇಶ್ವರ್ ನಗರವು ನಂತರದ ಸ್ಥಾನದಲ್ಲಿದೆ ಎಂದು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ತಿಳಿಸಿದೆ.
ದೇಶದ ವಿವಿಧ ನಗರಗಳಲ್ಲಿನ ಜನಸಂಖ್ಯೆ ಆಧಾರಿತವಾಗಿ ಎರಡು ವಿಭಾಗದಲ್ಲಿ ಈ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ವರದಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.