ಬೆಂಗಳೂರು: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ಕೊರೋನಾ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಸದ್ಯ ರಾಜ್ಯದ ತಾಲೂಕು ಆಸ್ಪತ್ರೆಗಳಲ್ಲಿ ಮಾತ್ರವೇ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಹೆಚ್ಚು ಜನರಿಗೆ ಲಸಿಕೆ ಪಡೆಯಲು ಅನುಕೂಲ ಒದಗಿಸುವ ನಿಟ್ಟಿನಲ್ಲಿ ಈ ಚಿಂತನೆ ನಡೆಸಲಾಗಿದೆ. ಆರೋಗ್ಯ ಕೇಂದ್ರಗಳಲ್ಲಿ ಸೌಲಭ್ಯಗಳ ಲಭ್ಯತೆಯ ಆಧಾರದಲ್ಲಿ ಲಸಿಕೆ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯನ್ವಯವೇ ಕೊರೋನಾ ಲಸಿಕೆ ವಿತರಣೆ ನಡೆಯಲಿದೆ. ಖಾಸಗಿ ಆರೋಗ್ಯ ಕೇಂದ್ರಗಳಿಗೂ ಲಸಿಕೆ ವಿತರಣೆಗೆ ಅವಕಾಶ ಒದಗಿಸಲಾಗುವುದು ಎಂದು ಸುಧಾಕರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.