ನವದೆಹಲಿ: ದೇಶಾದ್ಯಂತ ಹೆಚ್ಚು ಸ್ಪರ್ಧಾತ್ಮಕ ಮತ್ತು ಸ್ವೀಕಾರಾರ್ಹವಾಗುವಂತೆ ಸ್ಥಳೀಯವಾಗಿ ತಯಾರಿಸಿದ ಉತ್ಪನ್ನಗಳ ಗುಣಮಟ್ಟವನ್ನು ಸುಧಾರಿಸುವ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದ್ದು, ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಹೆಚ್ಚು ಬಳಕೆದಾರ ಸ್ನೇಹಿ, ಕೈಗೆಟುಕುವ, ಸುಸ್ಥಿರ ಉತ್ಪನ್ನಗಳನ್ನು ತಯಾರಿಸಲು ಸರ್ಕಾರ ಕೈಗಾರಿಕೆಗಳೊಂದಿಗೆ ಕೆಲಸ ಮಾಡುತ್ತಿದೆ ಎಂದಿದ್ದಾರೆ.
ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ, ಡಿಪಿಐಐಟಿ ಮತ್ತು ಉತ್ಪಾದನೆ ಸಂಬಂಧಿತ ಪ್ರೋತ್ಸಾಹಕ ಯೋಜನೆ ಕುರಿತು ನೀತಿ ಆಯೋಗದ ವೆಬ್ನಾರ್ ಅನ್ನು ಉದ್ದೇಶಿಸಿ ಅವರು ಮಾತನಾಡಿದರು. ಉತ್ಪಾದನೆಯನ್ನು ಹೆಚ್ಚಿಸಲು ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ದೇಶವನ್ನು ವಿವಿಧ ಕ್ಷೇತ್ರಗಳಲ್ಲಿ ಸ್ವಾವಲಂಬಿಗಳನ್ನಾಗಿ ಮಾಡಲು ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ.
ಉತ್ಪಾದನಾ ಸಂಬಂಧಿತ ಪ್ರೋತ್ಸಾಹಕ ಯೋಜನೆಯ ಮಹತ್ವವನ್ನು ತಿಳಿಸಿದ ಮೋದಿ, “ಇದು ವಿವಿಧ ಕೈಗಾರಿಕೆಗಳಿಗೆ ಅವುಗಳ ಉತ್ಪಾದನೆ ಮತ್ತು ಗುಣಮಟ್ಟದ ಉತ್ಪನ್ನಗಳ ಉತ್ಪಾದನೆಯನ್ನು ಹೆಚ್ಚಿಸಲು ಅಗತ್ಯವಾದ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ. ಈ ಯೋಜನೆಯು ಕೈಗಾರಿಕೆಗಳ ರಫ್ತು ಸಾಮರ್ಥ್ಯವನ್ನು ಹೆಚ್ಚಿಸುತ್ತದೆ, ಉದ್ಯೋಗವನ್ನು ನೀಡುತ್ತದೆ ಮತ್ತು ಆದಾಯವನ್ನು ಸುಧಾರಿಸುತ್ತದೆ. ಪಿಎಲ್ಐ ಯೋಜನೆಗಾಗಿ ಎರಡು ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚಿನ ಹಣವನ್ನು ಬಜೆಟ್ನಲ್ಲಿ ನೀಡಲಾಗಿದೆ ಮತ್ತು ಇದು ಮುಂಬರುವ ಐದು ವರ್ಷಗಳಲ್ಲಿ 520 ಬಿಲಿಯನ್ ಡಾಲರ್ ಮೌಲ್ಯದ ಉತ್ಪನ್ನಗಳ ಉತ್ಪಾದನೆಗೆ ಕಾರಣವಾಗಲಿದೆ” ಎಂದು ನಿರೀಕ್ಷಿಸಲಾಗಿದೆ ಎಂದಿದ್ದಾರೆ.
ವ್ಯಾಪಾರ ಮಾಡುವ ಸುಲಭತೆಯನ್ನು ಸುಧಾರಿಸುವುದು, ಅನುಸರಣೆ ಹೊರೆ ಕಡಿಮೆ ಮಾಡುವುದು, ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿತಗೊಳಿಸುವುದು ಮತ್ತು ಜಿಲ್ಲೆಗಳನ್ನು ರಫ್ತು ಕೇಂದ್ರಗಳಾಗಿ ಸಿದ್ಧಪಡಿಸುವುದು ಅಗತ್ಯ ಎಂದು ಮೋದಿ ಒತ್ತಿ ಹೇಳಿದ್ದಾರೆ.
2023 ರ ವರ್ಷವನ್ನು ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸುವುದನ್ನು ಉಲ್ಲೇಖಿಸಿದ ಪ್ರಧಾನಿ, ಇದು ರೈತರಿಗೆ ವಿಶಿಷ್ಟ ಅವಕಾಶಗಳನ್ನು ಒದಗಿಸುತ್ತದೆ ಎಂದು ಹೇಳಿದರು. ಸಿರಿಧಾನ್ಯ ಬಳಕೆಯು ಅದರ ಪೌಷ್ಟಿಕ ಮೌಲ್ಯದಿಂದಾಗಿ ರೋಗಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. ಸಿರಿಧಾನ್ಯ ಉತ್ಪಾದನೆ ಮತ್ತು ಸಂಸ್ಕರಣೆಯನ್ನು ಹೆಚ್ಚಿಸಲು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳುವಂತೆ ಅವರು ಕೃಷಿ ಮತ್ತು ಆಹಾರ ಸಂಸ್ಕರಣಾ ಕ್ಷೇತ್ರಗಳಿಗೆ ಮನವಿ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.