ಬೆಂಗಳೂರು: ಈ ಬಾರಿ ಸಾರ್ವಜನಿಕರಿಗೆ ಹೊರೆಯಾಗದಂತೆ, ಹೆಚ್ಚಿನ ತೆರಿಗೆ ವಿಧಿಸದೆ ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಕೊರೋನಾ ಸಂಕಷ್ಟದ ನಡುವೆಯೂ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸಮಾನವಾಗಿ ಅನುದಾನ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಲಿದೆ. ಕೃಷಿ, ನೀರಾವರಿ, ಮಹಿಳಾ ಸಬಲೀಕರಣ, ಪ್ರವಾಸೋದ್ಯಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರದ ಅಭಿವೃದ್ಧಿಗೆ ವೇಗ ನೀಡಲಾಗುತ್ತದೆ. ಮುಂದಿನ ಆರು ತಿಂಗಳ ಅವಧಿಯಲ್ಲಿ ನಗರದ ಸಂಪೂರ್ಣ ಚಿತ್ರಣವನ್ನೇ ಬದಲಾಯಿಸಲು ಕ್ರಮ ಕೈಗೊಳ್ಳಲಾಗುವುದು. ಸರ್ವ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.