ನವದೆಹಲಿ: ರೈಲ್ವೆ ಖಾತೆಯ ಮಾಜಿ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ದಿನೇಶ್ ತ್ರಿವೇದಿ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಟಿಎಂಸಿ ಮುಖಂಡರ ಪಕ್ಷಾಂತರದ ಸುದೀರ್ಘ ಪಟ್ಟಿಯಲ್ಲಿ ಇದು ಹೊಸ ಸೇರ್ಪಡೆಯಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳ ಮುಂಚೆ ತ್ರಿವೇದಿ ಅವರು ಬಿಜೆಪಿ ಸೇರ್ಪಡೆಗೊಂಡಿರುವುದು ಟಿಎಂಸಿಗೆ ದೊಡ್ಡ ಹೊಡೆತ ನೀಡಿದೆ. ಈಗಾಗಲೇ ಟಿಎಂಸಿ ಮತ್ತು ಬಿಜೆಪಿ ಎರಡು ರಾಜಕೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿನ ಸಮರ ಏರ್ಪಟ್ಟಿದ್ದು ಉಭಯ ಪಕ್ಷಗಳು ಬಂಗಾಳವನ್ನು ತಮ್ಮ ಕೈವಶ ಮಾಡಿಕೊಳ್ಳುವ ಕಾತುರತೆಯಲ್ಲಿವೆ.
ತ್ರಿವೇದಿ ಅವರು ಇತ್ತೀಚಿಗಷ್ಟೇ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ಎಂಟು ಹಂತಗಳಲ್ಲಿ ಅಲ್ಲಿ ಚುನಾವಣೆ ನಡೆಯಲಿದ್ದು, ಅದರ ಫಲಿತಾಂಶವನ್ನು ಮೇ 2 ರಂದು ಪ್ರಕಟವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.