ನವದೆಹಲಿ: ಪಶ್ವಿಮಬಂಗಾಳದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಕೋಲ್ಕತ್ತಾದಲ್ಲಿ ಭಾನುವಾರ ಬಿಜೆಪಿ ಬೃಹತ್ ಸಮಾವೇಶವನ್ನು ನಡೆಸಲಿದೆ. ಈ ಸಮಾವೇಶದಲ್ಲಿ ಟಿಎಂಸಿ ಮಾಜಿ ಸಂಸದ ಮಿಥುನ್ ಚಕ್ರವರ್ತಿ ಮತ್ತು ನಟ ಅಕ್ಷಯ್ ಕುಮಾರ್ ಅವರೊಂದಿಗೆ ಪ್ರಧಾನಿ ಮೋದಿ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಇತ್ತೀಚಿನ ಬೆಳವಣಿಗೆಯೊಂದರಲ್ಲಿ ಮೂಲಗಳು ತಿಳಿಸಿವೆ.
ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯಲಿರುವ ಪಿಎಂ ಮೋದಿಯವರ ಸಮಾವೇಶದಲ್ಲಿ ಚಕ್ರವರ್ತಿಗೆ ಭಾಗಿಯಾಗುವಂತೆ ಬಿಜೆಪಿ ಆಹ್ವಾನಿಸಿದೆ ಎಂದು ವರದಿಗಳು ಸೂಚಿಸಿವೆ. ಇದು ಚುನಾವಣಾ ಕಣ ಪಶ್ಚಿಮ ಬಂಗಾಳದ ಅತಿದೊಡ್ಡ ಸಮಾವೇಶಗಳಲ್ಲಿ ಒಂದಾಗಿದೆ ಎಂದು ಬಿಜೆಪಿಯ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27 ರಿಂದ 8 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ರಾಜ್ಯದಲ್ಲಿ ಮತ ಎಣಿಕೆ ಮೇ 2 ರಂದು ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.