ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗವು ಇಂದಿನಿಂದ ಆರಂಭವಾಗಲಿದೆ. ಎಲ್ಲಾ ಕೋವಿಡ್-19 ಮುನ್ನೆಚ್ಚರಿಕೆಗಳೊಂದಿಗೆ ಅಧಿವೇಶನ ಪ್ರಾರಂಭವಾಗಲಿದೆ. ಆದರೂ, ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಅಧಿವೇಶನದ ಅವಧಿಯನ್ನು ಕಡಿತಗೊಳಿಸುವ ಸಾಧ್ಯತೆಯಿದೆ.
ಮತದಾನದ ದಿನಾಂಕಗಳು ಹತ್ತಿರವಾಗುತ್ತಿದ್ದಂತೆ ಚುನಾವಣಾ ಪ್ರಚಾರವು ಕಾವು ಪಡೆಯತೊಡಗಿದ್ದು, ಹೆಚ್ಚಿನ ಪಕ್ಷಗಳ ರಾಜಕೀಯ ನಾಯಕರು ಪ್ರಚಾರದಲ್ಲಿ ಕಾರ್ಯನಿರತವಾಗಿರಲಿದ್ದಾರೆ.
ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ, ಪುದುಚೇರಿಗಳಲ್ಲಿ ವಿಧಾನಸಭಾ ಚುನಾವಣೆ ಮಾರ್ಚ್ 27 ರಿಂದ ಪ್ರಾರಂಭವಾಗಲಿದ್ದು, ಮೇ 2 ರಂದು ಮತ ಎಣಿಕೆಯೊಂದಿಗೆ ಮುಕ್ತಾಯಗೊಳ್ಳಲಿದೆ.
ಬಜೆಟ್ ಅಧಿವೇಶನವು ಏಪ್ರಿಲ್ 8 ರಂದು ಮುಕ್ತಾಯಗೊಳ್ಳಲಿದೆ. 2021-22ರ ಆರ್ಥಿಕ ವರ್ಷಕ್ಕೆ ಹಣಕಾಸು ಮಸೂದೆಯೊಂದಿಗೆ ವಿವಿಧ ಅನುದಾನಗಳ ಬೇಡಿಕೆಗಳನ್ನು ಅಂಗೀಕರಿಸುವುದು ಅಧಿವೇಶನದ ಪ್ರಮುಖ ಗಮನ. ಅಧಿವೇಶನದ ಎರಡನೇ ಭಾಗಕ್ಕೆ ಸರ್ಕಾರ ಹಲವಾರು ಮಸೂದೆಗಳನ್ನು ಪಟ್ಟಿ ಮಾಡಿದೆ. ಇದು ಮಂಡನೆಯಾಗುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.