ನವದೆಹಲಿ: ದೇಶದಲ್ಲಿ ಈವರೆಗೆ 2.9 ಕೋಟಿ ಫಲಾನುಭವಿಗಳಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಫಲಾನುಭವಿಗಳಿಗೆ ಒಟ್ಟು 66 ಸಾವಿರ ಡೋಸ್ ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಈ ನಡುವೆ, ಕಳೆದ 24 ಗಂಟೆಗಳಲ್ಲಿ 14 ಸಾವಿರಕ್ಕೂ ಹೆಚ್ಚು ರೋಗಿಗಳ ಒಟ್ಟು ಚೇತರಿಕೆಯೊಂದಿಗೆ ದೇಶದ ಕೋವಿಡ್-19 ಚೇತರಿಕೆ ಪ್ರಮಾಣವು ಶೇಕಡಾ 96.91 ಕ್ಕೆ ತಲುಪಿದೆ. ಈಗಾಗಲೇ 1.8 ಕೋಟಿ ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಪ್ರಸ್ತುತ, ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1, 88,747 ಆಗಿದ್ದು, ಒಟ್ಟು ಸಕಾರಾತ್ಮಕ ಪ್ರಕರಣಗಳಲ್ಲಿ ಕೇವಲ 1.68 ಶೇಕಡಾವನ್ನು ಮಾತ್ರ ಒಳಗೊಂಡಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 18 ಸಾವಿರ 599 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕಾರಾತ್ಮಕ ಪ್ರಕರಣಗಳನ್ನು ಒಂದು ಕೋಟಿ 12 ಲಕ್ಷಕ್ಕೆ ತೆಗೆದುಕೊಂಡು ಹೋಗಿದೆ. ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಯಲ್ಲಿ 97 ಸಾವುಗಳು ಸಂಭವಿಸಿವೆ. ದೇಶಾದ್ಯಂತ ಒಟ್ಟು ಸಾಅವಿನ ಪ್ರಕೃಣ ಒಂದು ಲಕ್ಷ 57 ಸಾವಿರಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ ವಿವಿಧ ಪ್ರಯೋಗಾಲಯಗಳು ಐದು ಲಕ್ಷ 37 ಸಾವಿರಕ್ಕೂ ಹೆಚ್ಚು ಕರೋನಾ ವೈರಸ್ ಮಾದರಿಗಳನ್ನು ಪರೀಕ್ಷೆ ನಡೆಸಿದ್ದು, ಈವರೆಗೆ ದೇಶದಲ್ಲಿ 22 ಕೋಟಿ 19 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳು ನಡೆದಿವೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.