ನವದೆಹಲಿ: ರಕ್ಷಣಾ ಮತ್ತು ಏರೋಸ್ಪೇಸ್ ವಲಯಗಳು ಈ ವರ್ಷದ ಜನವರಿಯವರೆಗೆ 4,191 ಕೋಟಿ ರೂಪಾಯಿಗಳ ವಿದೇಶಿ ನೇರ ಹೂಡಿಕೆಯನ್ನು ಪಡೆದಿವೆ ಎಂದು ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಅವರು ಇಂದು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ರಕ್ಷಣಾ ವಸ್ತುಗಳ ಸ್ಥಳೀಯ ಉತ್ಪಾದನೆಯನ್ನು ಹೆಚ್ಚಿಸಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದ ಅವರು, ಕಳೆದ ಐದು ವರ್ಷಗಳಲ್ಲಿ ಸಶಸ್ತ್ರ ಪಡೆಗಳಿಗೆ ರಕ್ಷಣಾ ಸಾಧನಗಳ ಬಂಡವಾಳ ಸಂಗ್ರಹಣೆಗಾಗಿ 304 ಒಪ್ಪಂದಗಳಲ್ಲಿ 190 ಒಪ್ಪಂದಗಳನ್ನು ಭಾರತೀಯ ಮಾರಾಟಗಾರರೊಂದಿಗೆಯೇ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಶ್ರೀ ನಾಯಕ್, ಉತ್ತರಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್ನಿಂದ ಒಂದು ಸಾವಿರ ಕೋಟಿಗೂ ಹೆಚ್ಚು ರೂಪಾಯಿಗಳ ಹೂಡಿಕೆಯನ್ನು ಮತ್ತು ತಮಿಳುನಾಡು ರಕ್ಷಣಾ ಕೈಗಾರಿಕಾ ಕಾರಿಡಾರ್ನಿಂದ ಎರಡು ಸಾವಿರ 72 ಕೋಟಿ ರೂಪಾಯಿಗಳನ್ನು ಆಕರ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.
ದೇಶೀಕರಣಕ್ಕಾಗಿ ಸುಮಾರು ಎಂಟು ಸಾವಿರ ರಕ್ಷಣಾ ವಸ್ತುಗಳನ್ನು SRIJAN ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಲಾಗಿದೆ ಎಂದು ಅವರು ಹೇಳಿದರು. ಈ ಪೋರ್ಟಲ್ ಒಂದು ಸ್ಟಾಪ್ ಆನ್ಲೈನ್ ಪೋರ್ಟಲ್ ಆಗಿದ್ದು, ಇದು ದೇಶೀಯೀಕರಣಕ್ಕಾಗಿ ವಸ್ತುಗಳನ್ನು ತೆಗೆದುಕೊಳ್ಳಲು ಮಾರಾಟಗಾರರಿಗೆ ಪ್ರವೇಶವನ್ನು ಒದಗಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.