ನವದೆಹಲಿ: ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಎಂದು ಸರ್ಕಾರ ಇಂದು ಹೇಳಿದೆ.
ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು, ಈ ವರ್ಷದ ಫೆಬ್ರವರಿವರೆಗೆ 15 ಭಯೋತ್ಪಾದಕ ಘಟನೆಗಳಲ್ಲಿ ಎಂಟು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದರು.
ಕಳೆದ ವರ್ಷ 244 ಭಯೋತ್ಪಾದಕ ಘಟನೆಗಳಲ್ಲಿ 221 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಅದೇ ರೀತಿ 2019 ರಲ್ಲಿ 594 ಭಯೋತ್ಪಾದಕ ಘಟನೆಗಳಲ್ಲಿ 157 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಈ ವರ್ಷ ಒಬ್ಬ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ರೆಡ್ಡಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.