ನವದೆಹಲಿ: ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರನ್ನು ರಾಜ್ ಭವನದಲ್ಲಿ ಭೇಟಿಯಾಗಿ ರಾಜೀನಾಮೆ ಪತ್ರ ನೀಡಿದ್ದಾರೆ.
ಡೆಹ್ರಾಡೂನ್ನಲ್ಲಿ ರಾಜ್ಯಪಾಲರನ್ನು ಭೇಟಿಯಾದ ನಂತರ ರಾವತ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು, ಜನರಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಪಕ್ಷದ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದರು.
“ನಾನು ರಾಜೀನಾಮೆಯನ್ನು ರಾಜ್ಯಪಾಲರಿಗೆ ನೀಡಿದ್ದೇನೆ” ಎಂದು ರಾವತ್ ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದರು.
ಯಾರು ತನ್ನ ನಂತರ ಸಿಎಂ ಹುದ್ದೆಯನ್ನು ವಹಿಸಿಕೊಳ್ಳುತ್ತಾರೋ ಅವರಿಗೆ ಅವರು ಶುಭ ಹಾರೈಕೆ ನೀಡಿದರು, ಆದರೆ ಅವರ ಸ್ಥಾನಕ್ಕೆ ಯಾರು ಬರುತ್ತಾರೆ ಎಂದು ಅವರು ಹೆಸರು ಬಹಿರಂಗಪಡಿಸಲಿಲ್ಲ.
ಸಂಸತ್ತಿನ ಸದಸ್ಯರಾಗಿರುವ ರಾಜ್ಯದ ಇಬ್ಬರು ಹಿರಿಯ ನಾಯಕರಾದ ಅಜಯ್ ಭಟ್ ಮತ್ತು ಅನಿಲ್ ಬಲೂನಿ ಅವರನ್ನು ಸಿಎಂ ಹುದ್ದೆಗೆ ಪ್ರಬಲ ಸಂಭವನೀಯರೆಂದು ಪರಿಗಣಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.