ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ 9 ಸಾವಿರ ಕೋಟಿ ಮೊತ್ತದ ಯೋಜನಾ ವರದಿ ತಯಾರಿಸಿ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಕೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಈ ಯೋಜನೆಯ ಕುರಿತಂತೆ ಅಗತ್ಯ ಎನಿಸಿದ ಅನುಮತಿಗಳನ್ನು ಪಡೆಯುವ ಕಾರ್ಯಗಳು ಮುಗಿದಿವೆ. ಶಾಸನಬದ್ಧವಾಗಿ ಸಮ್ಮತಿ ಪಡೆದ ಬಳಿಕ ಕಾಮಗಾರಿ ನಡೆಸಲು ಪೂರಕ ಕ್ರಮಗಳನ್ನು ವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಯೋಜನೆಯ ಸಮಗ್ರ ವರದಿಗೆ ಕೇಂದ್ರ ಜಲ ಆಯೋಗ ಸಮ್ಮತಿಸಬೇಕಾಗಿದೆ. ಈ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಭಿಪ್ರಾಯ ಕೇಳಿದೆ. ಇದರ ಸಮರ್ಪಕ ಅನುಷ್ಠಾನಕ್ಕೆ ಭೂಮಿಗಾಗಿ ಪರಿಸರ ಸಚಿವಾಲಯದ ಒಪ್ಪಿಗೆ ಪಡೆಯಬೇಕಾಗುತ್ತದೆ ಎಂದು ಅವರು ನುಡಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.