ಬೆಂಗಳೂರು: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನರೂ ಜಾಗರೂಕರಾಗಿರುವುದು ಅಗತ್ಯ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ನೆರೆಯ ರಾಜ್ಯಗಳಲ್ಲಿ ಕೊರೋನಾ ಏರಿಕೆ ರಾಜ್ಯಕ್ಕೂ ಎಚ್ಚರಿಕೆಯ ಗಂಟೆಯಾಗಿದೆ. ಆದ್ದರಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಸಂದರ್ಭದಲ್ಲಿ, ಸಭೆ, ಸಮಾರಂಭದಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಮತ್ತಿತರ ಕೊರೋನಾ ನಿಯಂತ್ರಣ ನಿಯಮಗಳನ್ನು ಅನುಸರಿಸುವುದು ಕಡ್ಡಾಯ ಎಂದು ಹೇಳಿದ್ದಾರೆ.
ಹಾಗೆಯೇ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು ಮತ್ತು 45 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರು ಕಡ್ಡಾಯವಾಗಿ ಕೊರೋನಾ ಲಸಿಕೆ ಪಡೆದುಕೊಳ್ಳುವಂತೆಯೂ ಸಚಿವರು ಸಲಹೆ ನೀಡಿದ್ದಾರೆ.
ಇನ್ನು ರಾಜ್ಯದಲ್ಲಿ ಕೆಲವು ಶಾಲೆಗಳು 1-5 ನೇ ತರಗತಿಗಳನ್ನು ಸರ್ಕಾರದ ನಿಯಮ ಮೀರಿ ಆರಂಭಿಸಿರುವ ಬಗ್ಗೆ ಬಂದಿರುವ ದೂರುಗಳ ಬಗ್ಗೆ ಮಾತನಾಡಿರುವ ಸುಧಾಕರ್, ಸರ್ಕಾರದ ಆದೇಶ ಮೀರಿ ತರಗತಿಗಳನ್ನು ಆರಂಭಿಸಿದ ಶಾಲೆಗಳ ಪರವಾನಗಿ ರದ್ದು ಮಾಡುವುದು, ಇನ್ನಿತರ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆಯೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.