ಬೆಂಗಳೂರು: ಎಫ್ಡಿಎ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳ ಸೋರಿಕೆಯಾದ ಬಳಿಕ ಎಚ್ಚೆತ್ತುಕೊಂಡಿರುವ ಕರ್ನಾಟಕ ಲೋಕಸೇವಾ ಆಯೋಗ ಮುಂದಿನ ದಿನಗಳಲ್ಲಿ 50% ರಷ್ಟು ಸಿಬ್ಬಂದಿಯನ್ನು ನಿಯೋಜನೆ ಮೇಲೆ ನೇಮಕ ಮಾಡಿಕೊಳ್ಳಲು ಚಿಂತನೆ ನಡೆಸಿದೆ.
ಆ ಮೂಲಕ ಏಳು ವರ್ಷಗಳ ಬಳಿಕ ಸರ್ಕಾರಿ ಹುದ್ದೆಗಳಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹತೆ ಆಧರಿತ, ಮುಕ್ತ ಮತ್ತು ನಿಷ್ಪಕ್ಷಪಾತ ವ್ಯವಸ್ಥೆ ಜಾರಿಗೆ ತರಲು ಪಿ. ಸಿ. ಹೋಟಾ ಸಮಿತಿ ನೀಡಿದ್ದ ಶಿಫಾರಸ್ಸನ್ನು ಜಾರಿಗೊಳಿಸಲು ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ವೃಂದ ನೇಮಕಾತಿ ಪ್ರಕ್ರಿಯೆಯನ್ನು ಬದಲಾವಣೆ ಮಾಡುವುದಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಪ್ರಸ್ತಾಪ ಸಲ್ಲಿಕೆ ಮಾಡಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಗೌಪ್ಯತೆ, ಪಾರದರ್ಶಕ ವ್ಯವಸ್ಥೆ ತರುವ ನಿಟ್ಟಿನಲ್ಲಿಯೂ ಇಂತಹ ವ್ಯವಸ್ಥೆ ಅಗತ್ಯವಾಗಿದೆ ಎಂದು ಕೆಪಿಎಸ್ಸಿ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.