ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ದೊರಕಿ 2022 ನೇ ವರ್ಷಕ್ಕೆ 75 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಸಬರಮತಿ ಆಶ್ರಮದಲ್ಲಿ ಅಮೃತ ಮಹೋತ್ಸವ ಚಟುವಟಿಕೆಗಳಿಗೆ ಚಾಲನೆ ನೀಡಲಿದ್ದಾರೆ.
ಇಂದಿನಿಂದ ಆರಂಭವಾಗಿ 75 ವಾರಗಳ ಕಾಲ ದೇಶದ 75 ಕಡೆಗಳಲ್ಲಿ ಅಮೃತ ಮಹೋತ್ಸವ ನಡೆಯಲಿದೆ. ಕರ್ನಾಟಕದಲ್ಲಿಯೂ 75 ನೇ ಸ್ವಾತಂತ್ರ್ಯೋತ್ಸವದ ಸವಿ ನೆನಪಿನ ಅಮೃತ ಮಹೋತ್ಸವ ನಡೆಯಲಿದ್ದು, ರಾಜ್ಯದ ಚಿಕ್ಕಬಳ್ಳಾಪುರದ ವಿದುರಾಶ್ವತ, ಮಂಡ್ಯ ಜಿಲ್ಲೆಯ ಶಿವಪುರ, ಬೆಳಗಾವಿಯ ಕಿತ್ತೂರಿನಲ್ಲಿ ಈ ವಿಶೇಷ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.
ಕರ್ನಾಟಕದ ಜಲಿಯನ್ ವಾಲಾಬಾಗ್ ಎಂದೇ ಖ್ಯಾತಿ ಪಡೆದಿರುವ ವಿದುರಾಶ್ವಥದಲ್ಲಿ ಇಂದು ಅಮೃತ ಮಹೋತ್ಸವ ಅಂಗವಾಗಿ ‘ಆಜಾದಿ ಕೀ ಅಮೃತ ಮಹೋತ್ಸವ’ ಕಾರ್ಯಕ್ರಮಕ್ಕೆ ರಾಜ್ಯಪಾಲ ವಜೂಭಾಯ್ ವಾಲಾ, ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಅರವಿಂದ ಲಿಂಬಾವಳಿ ಅವರು ಚಾಲನೆ ನೀಡಲಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಇದು ಸಮಸ್ತ ಭಾರತೀಯರ ಸಂಭ್ರಮಾಚರಣೆಯ ವರ್ಷ. 2022 ಆಗಸ್ಟ್ 15 ರಂದು ಸ್ವಾತಂತ್ರ್ಯ ಭಾರತ 75 ವರ್ಷಗಳನ್ನು ಪೂರೈಸಲಿದೆ. ಇದನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ದಂಡಿ ಸತ್ಯಾಗ್ರಹ ದಿನವಾದ ಇಂದಿನಿಂದಲೇ ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
‘ಇದು ಸಮಸ್ತ ಭಾರತೀಯರ ಸಂಭ್ರಮಾಚರಣೆಯ ಪರ್ವ. 2022ರ ಆಗಸ್ಟ್ 15ರಂದು ಸ್ವತಂತ್ರ ಭಾರತ 75 ವರ್ಷಗಳನ್ನು ಪೂರ್ಣಗೊಳಿಸಲಿದೆ. ಈ ಅಪೂರ್ವ ಸಂದರ್ಭವನ್ನು ಅರ್ಥಪೂರ್ಣವಾಗಿಸಲು #ಸ್ವಾತಂತ್ರ್ಯದಅಮೃತಮಹೋತ್ಸವ ಸಂಭ್ರಮಾಚರಣೆಗಳು, ದಂಡಿ ಸತ್ಯಾಗ್ರಹದ ದಿನವಾದ ಇಂದಿನಿಂದಲೇ ದೇಶಾದ್ಯಂತ ಪ್ರಾರಂಭಗೊಳ್ಳುತ್ತಿದೆ’: ಮುಖ್ಯಮಂತ್ರಿ @BSYBJP pic.twitter.com/2K0iZv0uMI
— CM of Karnataka (@CMofKarnataka) March 12, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.