ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿನ ಆರ್ಭಟ ಅಧಿಕವಾಗುತ್ತಿದೆ. ಆದ್ದರಿಂದ ಜನರು ಸರ್ಕಾರ ಸೂಚಿಸಿದ ಎಲ್ಲಾ ರೀತಿಯ ಕೊರೋನಾ ನಿಯಂತ್ರಣ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮುಖ್ಯಮಂತ್ರಿಗಳು ಕಿವಿಮಾತು ಹೇಳಿದ್ದಾರೆ.
ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಸ್ವಚ್ಛತೆ ಕಾಪಾಡುವುದು ಸೇರಿದಂತೆ ಇನ್ನೂ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲನೆ ಮಾಡಬೇಕು. ಯಾವ ಕಾರಣಕ್ಕೂ ಎಚ್ಚರ ತಪ್ಪದಂತೆಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.