ಬೆಂಗಳೂರು: ಕೊರೋನಾ ಸಂಕಷ್ಟದ ಕಾರಣಕ್ಕೆ ಈ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಶಾಲಾ-ಕಾಲೇಜು ನೋಂದಣಿ ನವೀಕರಣಕ್ಕೆ ರಾಜ್ಯ ಸರ್ಕಾರ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.
ಈ ಸಂಬಂಧ ಹೇಳಿಕೆ ನೀಡಿರುವ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ 2017-18 ಕ್ಕಿಂತಲೂ ಪೂರ್ವದಿಂದ ಕಾರ್ಯ ನಿರ್ವಹಿಸುತ್ತಿರುವ ಅನುದಾನಿತ, ಅನುದಾನ ರಹಿತ ಶಾಲೆಗಳ, ಪಪೂ ಕಾಲೇಜುಗಳ ದಾಖಲೆಗಳನ್ನು ಸಲ್ಲಿಸಲು ಈ ಶೈಕ್ಷಣಿಕ ವರ್ಷದಲ್ಲಿ ವಿನಾಯಿತಿ ಒದಗಿಸಲಾಗಿದೆ. ಕಳೆದ ವರ್ಷದ ದಾಖಲೆಗಳ ಆಧಾರದಲ್ಲಿ ಈ ಬಾರಿಯೂ ನೋಂದಣಿ, ನವೀಕರಣ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಾಗೆಯೇ ನವೀಕರಣಕ್ಕೆ ಸಂಬಂಧಿಸಿದಂತೆ ಆರ್ಟಿಇ ಹಣ ಮರುಪಾವತಿ ವಿಳಂಬ ಸೇರಿದಂತೆ ಅನವಶ್ಯಕ ಸಮಸ್ಯೆಗಳು ತಲೆದೋರದಂತೆ ಕ್ರಮ ವಹಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಗೆಯೇ ಸುಪ್ರೀಂಕೋರ್ಟ್ ಆದೇಶದನ್ವಯ ವಿದ್ಯಾರ್ಥಿಗಳು ಮತ್ತು ಶಾಲಾ ಸುರಕ್ಷತೆ ನಿಯಮಗಳ ರಚನೆಗೆ ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ಮುಂದಿನ ಒಂದು ತಿಂಗಳಿನಲ್ಲಿ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ವರದಿ ನೀಡಲಿದೆ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.