ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆಗಳನ್ನು ನಡೆಸದೆಯೇ ಪಾಸ್ ಮಾಡಲಾಗುತ್ತದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯ ಸರ್ಕಾರ ಇಂತಹ ಯಾವುದೇ ರೀತಿಯ ಚರ್ಚೆಯನ್ನು ಈ ವರೆಗೆ ನಡೆಸಿಲ್ಲ. ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಡೆಸದೆಯೇ ಅವರನ್ನು ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡುವುದು, ಬೇಸಿಗೆ ರಜೆ ನೀಡುವುದು ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಚರ್ಚೆಯನ್ನು ಈ ವರೆಗೆ ಸರ್ಕಾರ ನಡೆಸಿಲ್ಲ. ಈ ಸಂಬಂಧ ಶಿಕ್ಷಣ ಇಲಾಖೆ ಯಾವುದೇ ತರದ ತೀರ್ಮಾನಗಳನ್ನು ಸಹ ಕೈಗೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಶೈಕ್ಷಣಿಕ ವರ್ಷಗಳ ಉಳಿದ ತರಗತಿಗಳ ಆರಂಭಕ್ಕೆ ಸಂಬಂಧಿಸಿದಂತೆ ಪೋಷಕರು ಮತ್ತು ವಿದ್ಯಾರ್ಥಿಗಳಿಂದಲೂ ಒತ್ತಾಯಗಳು ಕೇಳಿ ಬರುತ್ತಿವೆ. ಈಗಾಗಲೇ ರಾಜ್ಯದಲ್ಲಿ 6 ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಶಾಲಾರಂಭ ಮಾಡಲಾಗಿದೆ. ಉಳಿದ ತರಗತಿಗಳ ಆರಂಭದ ಬಗ್ಗೆ ಕೊರೋನಾ ತಾಂತ್ರಿಕ ಸಲಹಾ ಸಮಿತಿಯ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.