ಬೆಂಗಳೂರು: ರಾಜ್ಯದಲ್ಲಿಯೂ ಕೊರೋನಾ ಸೋಂಕು ಮತ್ತೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಎಲ್ಲರೂ ಒಗ್ಗಟ್ಟಾಗಿ ರಾಜ್ಯವನ್ನು ಕೊರೋನಾ ಮುಕ್ತವಾಗಿಸೋಣ ಎಂದು ವಿನಂತಿ ಮಾಡಿದ್ದಾರೆ.
ಕೋರೋನಾ ವಿರುದ್ಧ ನಮ್ಮ ಹೋರಾಟ ಇನ್ನೂ ಮುಗಿದಿಲ್ಲ. ಲಸಿಕೆ ತೆಗೆದುಕೊಳ್ಳಲು ಅರ್ಹರಾದ ಎಲ್ಲರೂ ತಪ್ಪದೆ ಲಸಿಕೆ ಪಡೆದುಕೊಳ್ಳಿ. ಸ್ವದೇಶಿ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ಕಿಂಚಿತ್ತೂ ನಿರ್ಲಕ್ಷ್ಯ ವಹಿಸದೆ ಎಲ್ಲ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸೋಣ, ಒಗ್ಗಟ್ಟಿನಿಂದ ನಾವೆಲ್ಲರೂ ಕರ್ನಾಟಕವನ್ನು ಕೊರೋನಾ ಮುಕ್ತಗೊಳಿಸೋಣ ಎಂದು ಅವರು ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಕಳೆದ ಒಂದು ವರ್ಷಗಳಿಂದ ಕೊರೋನಾ ತಡೆಗೆ ನಾವೆಲ್ಲರೂ ಸಮರ ಸಾರಿದ್ದೇವೆ. ಪ್ರಸ್ತುತ ನಾವು ಮೈಮರೆತರೆ ಈ ವರೆಗೆ ನಾವು ಮಾಡಿರುವ ಎಲ್ಲಾ ಪ್ರಯತ್ನಗಳೂ ವ್ಯರ್ಥವಾದಂತಾಗುವುದು. ಆದ್ದರಿಂದ ಕೊರೋನಾ ಮುಂಜಾಗ್ರತಾ ನಿಯಮಗಳನ್ನು ಪಾಲಿಸುವುದು, ಕೊರೋನಾ ಲಸಿಕೆ ಪಡೆದುಕೊಳ್ಳುವುದಕ್ಕೆ ಅರ್ಹರಾದವರು ಲಸಿಕೆ ಪಡೆದುಕೊಳ್ಳುವ ಮೂಲಕ ಕೊರೋನಾದಿಂದ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳೋಣ ಎಂದು ಹೇಳಿದ್ದಾರೆ. ಕೊರೋನಾ ಯೋಧರು, ವಿಜ್ಞಾನಿಗಳು, ವೈದ್ಯರು ಮೊದಲಾದವರ ಬದ್ಧತೆ, ಪರಿಶ್ರಮಕ್ಕೆ ಕೃತಜ್ಞತೆ ಅರ್ಪಿಸೋಣ ಎಂದು ಅವರು ಹೇಳಿದ್ದಾರೆ.
ಕೋರೋನಾ ವಿರುದ್ಧ ನಮ್ಮ ಹೋರಾಟ ಇನ್ನೂ ಮುಗಿದಿಲ್ಲ. ಲಸಿಕೆ ತೆಗೆದುಕೊಳ್ಳಲು ಅರ್ಹರಾದ ಎಲ್ಲರೂ ತಪ್ಪದೆ ಲಸಿಕೆ ಪಡೆದುಕೊಳ್ಳಿ. ಸ್ವದೇಶಿ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ಕಿಂಚಿತ್ತೂ ನಿರ್ಲಕ್ಷ್ಯ ವಹಿಸದೆ ಎಲ್ಲ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸೋಣ, ಒಗ್ಗಟ್ಟಿನಿಂದ ನಾವೆಲ್ಲರೂ ಕರ್ನಾಟಕವನ್ನು ಕೊರೋನಾ ಮುಕ್ತಗೊಳಿಸೋಣ. pic.twitter.com/d6vDtFASR5
— B.S.Yediyurappa (@BSYBJP) March 14, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.