ಚೆನ್ನೈ: ತಮಿಳುನಾಡಿನ ಸಿ ಎ ಭವಾನಿ ದೇವಿ ಅವರು ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಮೊದಲ ಭಾರತೀಯ ಫೆನ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಏಪ್ರಿಲ್ 5, 2021 ರ ವೇಳೆಗೆ ವಿಶ್ವ ಶ್ರೇಯಾಂಕಗಳನ್ನು ಆಧರಿಸಿ ಏಷ್ಯಾ ಮತ್ತು ಓಷಿಯಾನಿಯಾ ಪ್ರದೇಶಕ್ಕೆ ಎರಡು ವೈಯಕ್ತಿಕ ಸ್ಪಾಟ್ಗಳು ದೊರೆತಿವೆ. ಭವಾನಿ 45 ನೇ ಸ್ಥಾನದಲ್ಲಿದ್ದಾರೆ ಮತ್ತು ಶ್ರೇಯಾಂಕದ ಆಧಾರದ ಮೇಲೆ ಲಭ್ಯವಿರುವ ಎರಡು ಸ್ಲಾಟ್ಗಳಲ್ಲಿ ಒಂದನ್ನು ಹೊಂದಿದ್ದಾರೆ.
ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು ಅವರು ಭವಾನಿ ದೇವಿ ಅವರು ಒಲಿಂಪಿಕ್ಸ್ಗೆ ಅರ್ಹತೆ ಪಡೆದಿದ್ದನ್ನು ಅಭಿನಂದಿಸಿದರು.
“ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆದಿರುವ ಭಾರತೀಯ ಫೆನ್ಸರ್ ಭವಾನಿ ದೇವಿ ಅವರಿಗೆ ಅಭಿನಂದನೆಗಳು! ಈ ಸಾಧನೆ ಮಾಡಿದ ಮೊದಲ ಭಾರತೀಯ ಫೆನ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರಿಗೆ ನನ್ನ ಶುಭಾಶಯಗಳು” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಎಂಟು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿರುವ ಇವರು, ರಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದರು. ಆದರೂ, ಟೋಕಿಯೊ ಒಲಿಂಪಿಕ್ಗೆ ಅರ್ಹತೆ ಪಡೆಯುವ ಪ್ರಯತ್ನಗಳನ್ನು ಅವರು ಚುರುಕುಗೊಳಿಸಿದರು.
ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ 2020 ರಲ್ಲಿ ನಡೆಯಬೇಕಿದ್ದ ಟೋಕಿಯೊ ಒಲಿಂಪಿಕ್ಸ್ ಅನ್ನು ಮುಂದೂಡಲಾಯಿತು ಮತ್ತು ಈ ವರ್ಷ ಜುಲೈ 23 ರಿಂದ ಆಗಸ್ಟ್ 8 ರವರೆಗೆ ಇದು ನಡೆಯಲಿದೆ.
It is a historic moment as @IamBhavaniDevi becomes the 1st ever fencer from India to qualify for the @Olympics in women’s individual sabre on basis of Adjusted Official ranking at the Men’s and Women’s Sabre World Cup in Budapest. Many congratulations! pic.twitter.com/aCoL0L6Fbt
— SAIMedia (@Media_SAI) March 14, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.